Gold Price Today: ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರವೂ ಇಳಿಕೆ

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,990 ರೂ. ಇದ್ದುದು 48,450 ರೂ. ಆಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 250 ರೂ. ಕುಸಿತವಾಗಿದೆ.

Gold Price Today: ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರವೂ ಇಳಿಕೆ
ಚಿನ್ನದ ಬೆಲೆ
Edited By:

Updated on: Apr 27, 2022 | 6:02 AM

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತಗಳು ಆಗುತ್ತಲೇ ಇರುತ್ತದೆ. ಇಂದು ಚಿನ್ನದ ದರ (Gold Rate) 580 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 250 ರೂ. ಇಳಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತವಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,990 ರೂ. ಇದ್ದುದು 48,450 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,440 ರೂ. ಇದ್ದುದು 52,860 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,810 ರೂ. ಮುಂಬೈ- 48,450 ರೂ, ದೆಹಲಿ- 48,450 ರೂ, ಕೊಲ್ಕತ್ತಾ- 48,450 ರೂ, ಬೆಂಗಳೂರು- 48,450 ರೂ, ಹೈದರಾಬಾದ್- 48,450 ರೂ, ಕೇರಳ- 48,450 ರೂ, ಪುಣೆ- 48,500 ರೂ, ಮಂಗಳೂರು- 48,450 ರೂ, ಮೈಸೂರು- 48,450 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 53,250 ರೂ, ಮುಂಬೈ- 52,860 ರೂ, ದೆಹಲಿ- 52,860 ರೂ, ಕೊಲ್ಕತ್ತಾ- 52,860 ರೂ, ಬೆಂಗಳೂರು- 52,860 ರೂ, ಹೈದರಾಬಾದ್- 52,860 ರೂ, ಕೇರಳ- 52,860 ರೂ, ಪುಣೆ- 52,910 ರೂ, ಮಂಗಳೂರು- 52,860 ರೂ, ಮೈಸೂರು- 52,860 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಕುಸಿತವಾಗಿದೆ. ಬೆಳ್ಳಿ ಬೆಲೆ ಕೂಡ (Silver Price) ಭಾರೀ ಇಳಿಕೆಯಾಗಿದೆ.

ಇಂದಿನ ಬೆಳ್ಳಿಯ ದರ:
ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 250 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 65,700 ರೂ. ಇದ್ದುದು ಇಂದು 65,450 ರೂ.ಗೆ ಇಳಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 70,500 ರೂ, ಮೈಸೂರು- 70,500 ರೂ., ಮಂಗಳೂರು- 70,500 ರೂ., ಮುಂಬೈ- 65,450 ರೂ, ಚೆನ್ನೈ- 70,500 ರೂ, ದೆಹಲಿ- 65,450 ರೂ, ಹೈದರಾಬಾದ್- 70,500 ರೂ, ಕೊಲ್ಕತ್ತಾ- 65,450 ರೂ. ಆಗಿದೆ.

ಇದನ್ನೂ ಓದಿ: Gold-Silver Rate: ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 26ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 25 ಸೋಮವಾರದ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

TV9 Web

TV9 Kannada

Read More
Loading...
Unable to load recommendations.
Follow Us