AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ ಒಂದೇ ದಿನ 2,000 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು ಭಾರೀ ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 55,000 ರೂ. ಆಗಿದೆ.

Gold Price Today: ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ ಒಂದೇ ದಿನ 2,000 ರೂ. ಇಳಿಕೆ
ಚಿನ್ನದ ಬೆಲೆImage Credit source: Live Mint
TV9 Web
| Edited By: |

Updated on:Jul 16, 2022 | 3:18 PM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಭಾರೀ ಕುಸಿತವಾಗಿದೆ. ಇಂದು 10 ಗ್ರಾಂ ಚಿನ್ನದ ದರ 430 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ನಿನ್ನೆ 600 ರೂ. ಏರಿಕೆಯಾಗಿತ್ತು. ಆದರೆ, ಇಂದು ಬೆಳ್ಳಿ ದರ 1 ಕೆಜಿಗೆ ಬರೋಬ್ಬರಿ 2,000 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,900 ರೂ. ಇದ್ದುದು 46,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,160 ರೂ. ಇದ್ದುದು 50,730 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,360 ರೂ. ಮುಂಬೈ- 46,500 ರೂ, ದೆಹಲಿ- 46,500 ರೂ, ಕೊಲ್ಕತ್ತಾ- 46,500 ರೂ, ಬೆಂಗಳೂರು- 46,580 ರೂ, ಹೈದರಾಬಾದ್- 46,500 ರೂ, ಕೇರಳ- 46,500 ರೂ, ಪುಣೆ- 46,530 ರೂ, ಮಂಗಳೂರು- 46,580 ರೂ, ಮೈಸೂರು- 46,580 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ಬರೋಬ್ಬರಿ 6,100 ರೂ. ಕುಸಿತ ಕಂಡ ಬೆಳ್ಳಿ ಬೆಲೆ; ಚಿನ್ನದ ಬೆಲೆಯೂ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,580 ರೂ, ಮುಂಬೈ- 50,730 ರೂ, ದೆಹಲಿ- 50,730 ರೂ, ಕೊಲ್ಕತ್ತಾ- 50,730 ರೂ, ಬೆಂಗಳೂರು- 50,820 ರೂ, ಹೈದರಾಬಾದ್- 50,730 ರೂ, ಕೇರಳ- 50,730 ರೂ, ಪುಣೆ- 50,760 ರೂ, ಮಂಗಳೂರು- 50,820 ರೂ, ಮೈಸೂರು- 50,820 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಭಾರೀ ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 55,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,400 ರೂ, ಮೈಸೂರು- 60,400 ರೂ., ಮಂಗಳೂರು- 60,400 ರೂ., ಮುಂಬೈ- 55,000 ರೂ, ಚೆನ್ನೈ- 60,400 ರೂ, ದೆಹಲಿ- 55,000 ರೂ, ಹೈದರಾಬಾದ್- 60,400 ರೂ, ಕೊಲ್ಕತ್ತಾ- 55,000 ರೂ. ಆಗಿದೆ.

Published On - 5:57 am, Sat, 16 July 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್