AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಇಳಿಕೆ; ಒಂದೇ ದಿನದಲ್ಲಿ 1,200 ರೂ. ಕುಸಿತ ಕಂಡ ಬೆಳ್ಳಿ ದರ

Silver Price Today: ಭಾರತದಲ್ಲಿ ಇಂದು ಮತ್ತೆ ಚಿನ್ನದ ದರ 210 ರೂ. ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು 1,200 ರೂ. ಇಳಿಕೆಯಾಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಇಳಿಕೆ; ಒಂದೇ ದಿನದಲ್ಲಿ 1,200 ರೂ. ಕುಸಿತ ಕಂಡ ಬೆಳ್ಳಿ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 11, 2022 | 5:56 AM

Share

ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಕುಸಿತವಾಗಿದೆ. ಇಂದು ಮತ್ತೆ ಚಿನ್ನದ ದರ 210 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1,200 ರೂ. ಇಳಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 52,100 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,850 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,780 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

ಇದನ್ನೂ ಓದಿ: Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,200 ರೂ, ಮುಂಬೈ- 52,100 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 52,100 ರೂ, ಬೆಂಗಳೂರು- 52,100 ರೂ, ಹೈದರಾಬಾದ್- 52,100 ರೂ, ಕೇರಳ- 52,100 ರೂ, ಪುಣೆ- 52,130 ರೂ, ಮಂಗಳೂರು- 52,100 ರೂ, ಮೈಸೂರು- 52,100 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು 1,200 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,200 ರೂ. ಇದ್ದುದು ಇಂದು 61,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 61,000 ರೂ, ಚೆನ್ನೈ- 67,000 ರೂ, ದೆಹಲಿ- 61,000 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 61,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ