AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಕೊಂಚ ಇಳಿಕೆ

Silver Price Today: ಬೆಳ್ಳಿ ದರ ಇಂದು 100 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,000 ರೂ. ಇದ್ದುದು ಇಂದು 56,900 ರೂ. ಆಗಿದೆ.

Gold Price Today: ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಕೊಂಚ ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Oct 01, 2022 | 10:29 AM

Share

Gold Price on 1st October 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 170 ರೂ. ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Price) ಕೂಡ ಇಂದು 100 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು ಇಂದು 46,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,900 ರೂ. ಇದ್ದುದು 50,730 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,900 ರೂ. ಮುಂಬೈ- 46,500 ರೂ, ದೆಹಲಿ- 45,650 ರೂ, ಕೊಲ್ಕತ್ತಾ- 46,500 ರೂ, ಬೆಂಗಳೂರು- 46,550 ರೂ, ಹೈದರಾಬಾದ್- 46,500 ರೂ, ಕೇರಳ- 46,500 ರೂ, ಪುಣೆ- 46,530 ರೂ, ಮಂಗಳೂರು- 46,550 ರೂ, ಮೈಸೂರು- 46,550 ರೂ. ಇದೆ.

ಇದನ್ನೂ ಓದಿ: Gold Price Today: ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಹೀಗಿದೆ; ಬೆಳ್ಳಿ ದರ 400 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,160 ರೂ, ಮುಂಬೈ- 50,730 ರೂ, ದೆಹಲಿ- 50,890 ರೂ, ಕೊಲ್ಕತ್ತಾ- 50,730 ರೂ, ಬೆಂಗಳೂರು- 50,730 ರೂ, ಹೈದರಾಬಾದ್- 50,730 ರೂ, ಕೇರಳ- 50,730 ರೂ, ಪುಣೆ- 50,760 ರೂ, ಮಂಗಳೂರು- 50,760 ರೂ, ಮೈಸೂರು- 50,760 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 100 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,000 ರೂ. ಇದ್ದುದು ಇಂದು 56,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,000 ರೂ, ಮೈಸೂರು- 62,000 ರೂ., ಮಂಗಳೂರು- 62,000 ರೂ., ಮುಂಬೈ- 56,900 ರೂ, ಚೆನ್ನೈ- 62,000 ರೂ, ದೆಹಲಿ- 56,900 ರೂ, ಹೈದರಾಬಾದ್- 62,000 ರೂ, ಕೊಲ್ಕತ್ತಾ- 56,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ