Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ ಹೆಚ್ಚಳ

Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,200 ರೂ. ಇದ್ದುದು 47,000 ರೂ. ಆಗಿದೆ. ಇಂದು 1 ಕೆಜಿ ಬೆಳ್ಳಿ ಬೆಲೆ 400 ರೂ. ಏರಿಕೆಯಾಗಿದೆ.

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ ಹೆಚ್ಚಳ
ಚಿನ್ನದ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 05, 2022 | 5:59 AM

ಬೆಂಗಳೂರು: ಈ ಬಾರಿ ಅಕ್ಷಯ ತೃತೀಯದ ಸಂದರ್ಭದಲ್ಲೂ ಚಿನ್ನದ ಬೆಲೆ ಏರಿಕೆಯಾಗಿರಲಿಲ್ಲ. ಚಿನ್ನದ ಬೆಲೆಯಲ್ಲಿ ಇಂದು (Gold Price) ಕೂಡ ಮತ್ತೆ ಇಳಿಕೆಯಾಗಿದ್ದು, 230 ರೂ. ಕುಸಿತ ಕಂಡಿದೆ. ಆದರೆ, ಬೆಳ್ಳಿಯ ಬೆಲೆ (Silver Price) ಇಂದು 400 ರೂ. ಏರಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,200 ರೂ. ಇದ್ದುದು 47,000 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,510 ರೂ. ಇದ್ದುದು 51,280 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,100 ರೂ. ಮುಂಬೈ- 47,000 ರೂ, ದೆಹಲಿ- 47,000 ರೂ, ಕೊಲ್ಕತ್ತಾ- 47,000 ರೂ, ಬೆಂಗಳೂರು- 47,000 ರೂ, ಹೈದರಾಬಾದ್- 47,000 ರೂ, ಕೇರಳ- 47,000 ರೂ, ಪುಣೆ- 47,100 ರೂ, ಮಂಗಳೂರು- 47,000 ರೂ, ಮೈಸೂರು- 47,000 ರೂ. ಇದೆ. (Source)

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,320 ರೂ, ಮುಂಬೈ- 51,280 ರೂ, ದೆಹಲಿ- 51,280 ರೂ, ಕೊಲ್ಕತ್ತಾ- 51,280 ರೂ, ಬೆಂಗಳೂರು- 51,280 ರೂ, ಹೈದರಾಬಾದ್- 51,280 ರೂ, ಕೇರಳ- 51,280 ರೂ, ಪುಣೆ- 51,380 ರೂ, ಮಂಗಳೂರು- 51,280 ರೂ, ಮೈಸೂರು- 51,280 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಕುಸಿತವಾಗಿದೆ. ಬೆಳ್ಳಿ ಬೆಲೆ (Silver Price) ಕೊಂಚ ಏರಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು 1 ಕೆಜಿ ಬೆಳ್ಳಿ ಬೆಲೆ 400 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 62,300 ರೂ. ಇದ್ದುದು ಇಂದು 62,700 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 62,700 ರೂ, ಚೆನ್ನೈ- 67,000 ರೂ, ದೆಹಲಿ- 62,700 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 62,700 ರೂ. ಆಗಿದೆ.

ವಾಣಿಜ್ಯದ ಕುರಿತ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ