Gold Price Today: 10 ಗ್ರಾಂಗೆ 540 ರೂ. ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಭಾರೀ ಇಳಿಕೆ

ದಾಖಲೆಯ ಮೊತ್ತಕ್ಕೇರಿದ್ದ ಚಿನ್ನದ ಬೆಲೆ 2 ದಿನಗಳಿಂದ ಕುಸಿತ ಕಾಣುತ್ತಿದೆ. ಬೆಳ್ಳಿ ದರದಲ್ಲಿ ಕೂಡ ಭಾರೀ ಕುಸಿತವಾಗುತ್ತಿದ್ದು, ನಿನ್ನೆಗಿಂತ ಇಂದು 1,000 ರೂ. ಕಡಿಮೆಯಾಗಿದೆ.

Gold Price Today: 10 ಗ್ರಾಂಗೆ 540 ರೂ. ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಭಾರೀ ಇಳಿಕೆ
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Feb 27, 2022 | 6:05 AM

Gold and Silver Rate: ಉಕ್ರೇನ್ ಮೇಲೆ ರಷ್ಯಾ ಯುದ್ಧ (Russia- Ukraine War) ನಡೆಸಿದ ಬಳಿಕ ಭಾರತದಲ್ಲಿ ಗಗನಕ್ಕೇರಿದ್ದ ಚಿನ್ನದ ಬೆಲೆ ಇಂದು ಇದ್ದಕ್ಕಿದ್ದಂತೆ 10 ಗ್ರಾಂಗೆ 540 ರೂ. ಕುಸಿತ ಕಂಡಿದೆ. ರಷ್ಯಾ-ಉಕ್ರೇನ್ ಸಂಘರ್ಷದಿಂದ ಚಿನ್ನದ ಬೆಲೆ (Gold Rate) ಇನ್ನೂ ಹೆಚ್ಚಾಗುವ ಆತಂಕ ಎದುರಾಗಿತ್ತು. ಆದರೆ, ಇಂದು ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ ಕಂಡಿರುವುದರಿಂದ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 540 ರೂ. ಕುಸಿತವಾಗಿದೆ. ಅತ್ತ ಬೆಳ್ಳಿ ದರದಲ್ಲಿ (Silver Price) ಕೂಡ ಭಾರೀ ಕುಸಿತವಾಗುತ್ತಿದ್ದು, ನಿನ್ನೆಗಿಂತ ಇಂದು 1,000 ರೂ. ಕಡಿಮೆಯಾಗಿದೆ.

ದಾಖಲೆಯ ಮೊತ್ತಕ್ಕೇರಿದ್ದ ಚಿನ್ನದ ಬೆಲೆ 2 ದಿನಗಳಿಂದ ಕುಸಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದರೂ ಕೂಡ ಭಾರತದಲ್ಲಿ ಮಾತ್ರ ಕುಸಿತ ಕಂಡಿದೆ. ಆದರೆ, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುವ ನಿರೀಕ್ಷೆಯಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಈ ವರ್ಷಾಂತ್ಯದ ವೇಳೆಗೆ ಚಿನ್ನದ ಬೆಲೆ 60,000 ರೂ. ಗಡಿ ದಾಟುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 46,850 ರೂ. ಇದ್ದುದು ಇಂದು 46,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ. ಇದ್ದುದು 50,700 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,380 ರೂ, ಮುಂಬೈ- 46,350 ರೂ, ದೆಹಲಿ- 46,350 ರೂ, ಕೊಲ್ಕತ್ತಾ- 46,350 ರೂ, ಬೆಂಗಳೂರು- 46,350 ರೂ, ಹೈದರಾಬಾದ್- 46,350 ರೂ, ಕೇರಳ- 46,350 ರೂ, ಪುಣೆ- 46,450 ರೂ, ಮಂಗಳೂರು- 46,350 ರೂ, ಮೈಸೂರು- 46,350 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,700 ರೂ, ಮುಂಬೈ- 50,570 ರೂ, ದೆಹಲಿ- 50,570 ರೂ, ಕೊಲ್ಕತ್ತಾ- 50,570 ರೂ, ಬೆಂಗಳೂರು- 50,570 ರೂ, ಹೈದರಾಬಾದ್- 50,570 ರೂ, ಕೇರಳ- 50,570 ರೂ, ಪುಣೆ- 50,650 ರೂ, ಮಂಗಳೂರು- 50,570 ರೂ, ಮೈಸೂರು- 50,570 ರೂ. ಇದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಇಂದು ಭಾರೀ ಕುಸಿತ ಕಂಡುಬಂದಿದೆ. ನಿನ್ನೆಗಿಂತ ಇಂದು 1 ಕೆಜಿ ಬೆಳ್ಳಿಗೆ 1,000 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿ ದರ 65,000 ರೂ. ಇದ್ದುದು 64,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 69,000 ರೂ, ಮೈಸೂರು- 69,000 ರೂ., ಮಂಗಳೂರು- 69,000 ರೂ., ಮುಂಬೈ- 64,000 ರೂ, ಚೆನ್ನೈ- 69,000 ರೂ, ದೆಹಲಿ- 64,000 ರೂ, ಹೈದರಾಬಾದ್- 69,000 ರೂ, ಕೊಲ್ಕತ್ತಾ- 64,000 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ಖರೀದಿಸಲು ಇದು ಸಕಾಲ

Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್