AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 600 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,000 ರೂ. ಇದ್ದುದು ಇಂದು 59,400 ರೂ. ಆಗಿದೆ.

Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Jun 30, 2022 | 6:04 AM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಚಿನ್ನದ ಬೆಲೆ ಸ್ವಲ್ಪವೂ ಏರಿಳಿತವಾಗಿರಲಿಲ್ಲ. ಆದರೆ, ಇಂದು 10 ಗ್ರಾಂ ಚಿನ್ನದ ಬೆಲೆ (Gold Rate) ಬರೋಬ್ಬರಿ 980 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 600 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಕುಸಿತವಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,830 ರೂ. ಮುಂಬೈ- 46,750 ರೂ, ದೆಹಲಿ- 46,750 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,750 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,750 ರೂ, ಮೈಸೂರು- 46,750 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಖರೀದಿಸಲು ಇದು ಬೆಸ್ಟ್​ ಟೈಂ; ಬೆಳ್ಳಿ ದರ ಕೊಂಚ ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,090 ರೂ, ಮುಂಬೈ- 51,000 ರೂ, ದೆಹಲಿ- 51,050 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,020 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,000 ರೂ, ಮೈಸೂರು- 51,000 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 600 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,000 ರೂ. ಇದ್ದುದು ಇಂದು 59,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,300 ರೂ, ಮೈಸೂರು- 65,300 ರೂ., ಮಂಗಳೂರು- 65,300 ರೂ., ಮುಂಬೈ- 59,400 ರೂ, ಚೆನ್ನೈ- 65,300 ರೂ, ದೆಹಲಿ- 59,400 ರೂ, ಹೈದರಾಬಾದ್- 65,300 ರೂ, ಕೊಲ್ಕತ್ತಾ- 59,400 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್