AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕುಸಿತ; ಹಲವು ನಗರಗಳಲ್ಲಿ 400 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 400 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 55,600 ರೂ. ಇದ್ದುದು ಇಂದು 55,200 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕುಸಿತ; ಹಲವು ನಗರಗಳಲ್ಲಿ 400 ರೂ. ಇಳಿಕೆ
ಚಿನ್ನದ ಬೆಲೆ Image Credit source: Zee News
TV9 Web
| Edited By: |

Updated on: Aug 23, 2022 | 6:21 AM

Share

Gold Price on 23rd August 2022 | ಬೆಂಗಳೂರು: ಭಾರತದಲ್ಲಿ ಕಳೆದ ಮೂರು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು ಕೊಂಚ ಕುಸಿತವಾಗಿದೆ. ಇಂದು ಬಂಗಾರದ ಬೆಲೆ 220 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 400 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೊಂಚ ಇಳಿಕೆಯಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,800 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,150 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,150 ರೂ. ಮುಂಬೈ- 47,600 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,630 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಇದನ್ನೂ ಓದಿ: Gold Price Today: ಹೆಚ್ಚಳವಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 700 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,530 ರೂ, ಮುಂಬೈ- 51,930 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 51,960 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 400 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 55,600 ರೂ. ಇದ್ದುದು ಇಂದು 55,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,100 ರೂ, ಮೈಸೂರು- 61,100 ರೂ., ಮಂಗಳೂರು- 61,100 ರೂ., ಮುಂಬೈ- 55,200 ರೂ, ಚೆನ್ನೈ- 61,100 ರೂ, ದೆಹಲಿ- 55,200 ರೂ, ಹೈದರಾಬಾದ್- 61,100 ರೂ, ಕೊಲ್ಕತ್ತಾ- 55,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್