Gold Price Today: 2 ದಿನಗಳಿಂದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ 500 ರೂ. ಇಳಿಕೆ

Gold Price Today: 2 ದಿನಗಳಿಂದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ 500 ರೂ. ಇಳಿಕೆ
ಚಿನ್ನದ ಬೆಲೆ
Image Credit source: DNA

Silver Price Today: ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 52,250 ರೂ. ಇದ್ದುದು 51,980 ರೂ. ಆಗಿದೆ.

TV9kannada Web Team

| Edited By: Sushma Chakre

May 27, 2022 | 6:02 AM

ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಕುಸಿತ ಕಂಡಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ 270 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಕೊಂಚ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,250 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,650 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,700 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ. (Source)

ಇದನ್ನೂ ಓದಿ: Gold Price Today: ಬೆಂಗಳೂರು, ಮುಂಬೈ, ದೆಹಲಿಯಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,980 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,000 ರೂ. ಇದ್ದುದು ಇಂದು 61,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 61,500 ರೂ, ಚೆನ್ನೈ- 66,000 ರೂ, ದೆಹಲಿ- 61,500 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 61,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada