Gold Price Today: 2 ದಿನಗಳ ಬಳಿಕ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 1,300 ರೂ. ಇಳಿಕೆ

Silver Price Today: ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ ಇಂದು 1 ಕೆಜಿಗೆ ಬರೋಬ್ಬರಿ 1,300 ರೂ. ಕುಸಿತ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿತ್ತು. ಆದರೆ, ಇಂದು ಬಂಗಾರದ ದರ ಕುಸಿತ ಕಂಡಿದೆ.

Gold Price Today: 2 ದಿನಗಳ ಬಳಿಕ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 1,300 ರೂ. ಇಳಿಕೆ
ಚಿನ್ನದ ಬೆಲೆ
Follow us
| Updated By: ಸುಷ್ಮಾ ಚಕ್ರೆ

Updated on: Mar 24, 2022 | 6:05 AM

ಬೆಂಗಳೂರು: 2-3 ದಿನಗಳಿಂದ ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಇಂದು ಇಳಿಕೆ ಕಂಡಿದೆ. ಚಿನ್ನದ ಬಗೆಗಿನ ಜನರ ಆಕರ್ಷಣೆ, ಪ್ರೀತಿ ಇಂದು- ನಿನ್ನೆಯದಲ್ಲ. ಮದುವೆ, ಸಮಾರಂಭಗಳು, ಅಕ್ಷಯ ತೃತೀಯ ಹೀಗೆ ವಿಶೇಷ ಸಂದರ್ಭದಲ್ಲಿ ಮಾತ್ರವಲ್ಲದೆ ಹೂಡಿಕೆಯಾಗಿಯೂ ಬಂಗಾರವನ್ನು ಖರೀದಿಸುವವರಿದ್ದಾರೆ. 2 ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಇಳಿಕೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 400 ರೂ. ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಂದು 1 ಕೆಜಿಗೆ ಬರೋಬ್ಬರಿ 1,300 ರೂ. ಕುಸಿತ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿತ್ತು. ಆದರೆ, ಇಂದು ಬಂಗಾರದ ದರ ಕುಸಿತ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,100 ರೂ. ಇದ್ದುದು 51,670 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,810 ರೂ. ಮುಂಬೈ- 47,350 ರೂ, ದೆಹಲಿ- 47,350 ರೂ, ಕೊಲ್ಕತ್ತಾ- 47,350 ರೂ, ಬೆಂಗಳೂರು- 47,350 ರೂ, ಹೈದರಾಬಾದ್- 47,350 ರೂ, ಕೇರಳ- 47,350 ರೂ, ಪುಣೆ- 47,420 ರೂ, ಮಂಗಳೂರು- 47,350 ರೂ, ಮೈಸೂರು- 47,350 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,160 ರೂ, ಮುಂಬೈ- 51,670 ರೂ, ದೆಹಲಿ- 51,670 ರೂ, ಕೊಲ್ಕತ್ತಾ- 51,670 ರೂ, ಬೆಂಗಳೂರು- 51,670 ರೂ, ಹೈದರಾಬಾದ್- 51,670 ರೂ, ಕೇರಳ- 51,670 ರೂ, ಪುಣೆ- 51,740 ರೂ, ಮಂಗಳೂರು- 51,670 ರೂ, ಮೈಸೂರು- 51,670 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ಕಳೆದ ವಾರದಿಂದ ಗಗನಕ್ಕೇರಿದ್ದ ಬೆಳ್ಳಿ ಬೆಲೆ ಇಂದು ಭಾರೀ ಇಳಿಕೆ ಕಂಡಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 1,300 ರೂ. ಇಳಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 68,900 ರೂ. ಇದ್ದುದು ಇಂದು 67,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 71,900 ರೂ, ಮೈಸೂರು- 71,900 ರೂ., ಮಂಗಳೂರು- 71,900 ರೂ., ಮುಂಬೈ- 67,600 ರೂ, ಚೆನ್ನೈ- 71,900 ರೂ, ದೆಹಲಿ- 67,600 ರೂ, ಹೈದರಾಬಾದ್- 71,900 ರೂ, ಕೊಲ್ಕತ್ತಾ- 67,600 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 600 ರೂ. ಹೆಚ್ಚಳ

Gold Price Today: ಮತ್ತೆ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಎಷ್ಟು ಗೊತ್ತಾ?

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ