Gold Price Today: 3 ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ

Silver Price on March 16: ಭಾರತದ ಅನೇಕ ನಗರಗಳಲ್ಲಿ 3 ದಿನಗಳಿಂದ ಚಿನ್ನದ ಬೆಲೆ ಕುಸಿತವಾಗಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು ಇಂದು 47,600 ರೂ.ಗೆ ಕುಸಿತ ಕಂಡಿದೆ.

Gold Price Today: 3 ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ
ಚಿನ್ನದ ಆಭರಣ
Follow us
| Updated By: ಸುಷ್ಮಾ ಚಕ್ರೆ

Updated on: Mar 16, 2022 | 5:55 AM

ಬೆಂಗಳೂರು: ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿತ್ತು. ಆದರೆ, 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಇಳಿಮುಖವಾಗಿದೆ. ಇಂದು ಕೂಡ 10 ಗ್ರಾಂ ಚಿನ್ನಕ್ಕೆ 540 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ನಿನ್ನೆಗಿಂತಲೂ ಇಂದು 1,000ರೂ. ಇಳಿಕೆ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ನಿಮಗಿದು ಶುಭ ಸುದ್ದಿ. ಹಾಗಾದರೆ, ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಅನೇಕ ನಗರಗಳಲ್ಲಿ 3 ದಿನಗಳಿಂದ ಚಿನ್ನದ ಬೆಲೆ ಕುಸಿತವಾಗಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು ಇಂದು 47,600 ರೂ.ಗೆ ಕುಸಿತ ಕಂಡಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,470 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,190 ರೂ. ಮುಂಬೈ- 47,600 ರೂ, ದೆಹಲಿ- 47,600 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,600 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,680 ರೂ, ಮಂಗಳೂರು- 47,600 ರೂ, ಮೈಸೂರು- 47,600 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,570 ರೂ, ಮುಂಬೈ- 51,930 ರೂ, ದೆಹಲಿ- 51,930 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,930 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 52,010 ರೂ, ಮಂಗಳೂರು- 51,930 ರೂ, ಮೈಸೂರು- 51,930 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಬೆಳ್ಳಿ ಬೆಲೆ ಬರೋಬ್ಬರಿ 1,000 ರೂ. ಕುಸಿತ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 70,000 ರೂ. ಇದ್ದುದು 69,000 ರೂ. ಆಗಿದೆ. ದಾಖಲೆಯ ಮಟ್ಟಕ್ಕೇರಿದ್ದ ಬೆಳ್ಳಿ ಬೆಲೆ ಒಂದೇ ದಿನದಲ್ಲಿ ಭಾರೀ ಕುಸಿತ ಕಂಡಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,800 ರೂ, ಮೈಸೂರು- 72,800 ರೂ., ಮಂಗಳೂರು- 72,800 ರೂ., ಮುಂಬೈ- 69,000 ರೂ, ಚೆನ್ನೈ- 72,800 ರೂ, ದೆಹಲಿ- 69,000 ರೂ, ಹೈದರಾಬಾದ್- 72,800 ರೂ, ಕೊಲ್ಕತ್ತಾ- 69,000 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ 4,700 ರೂ. ಕುಸಿತ ಬೆಳ್ಳಿ ದರ; ಚಿನ್ನದ ಬೆಲೆಯೂ ಇಳಿಕೆ

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಂಗಳೂರಿನಲ್ಲಿ ದಾಖಲೆ ಬರೆದ ಬೆಳ್ಳಿ ದರ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್