Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ದರವೂ 100 ರೂ. ಏರಿಕೆ

Silver Price Today: ಬೆಳ್ಳಿ ಬೆಲೆಯಲ್ಲಿ ಇಂದು 100 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,900 ರೂ. ಇದ್ದುದು ಇಂದು 61,000 ರೂ. ಆಗಿದೆ.

Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ದರವೂ 100 ರೂ. ಏರಿಕೆ
ಸಾಂದರ್ಭಿಕ ಚಿತ್ರ
Edited By:

Updated on: Jun 21, 2022 | 5:53 AM

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು 100 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 100 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,080 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,850 ರೂ. ಮುಂಬೈ- 47,750 ರೂ, ದೆಹಲಿ- 47,780 ರೂ, ಕೊಲ್ಕತ್ತಾ- 47,780 ರೂ, ಬೆಂಗಳೂರು- 47,780 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,800 ರೂ, ಮಂಗಳೂರು- 47,780 ರೂ, ಮೈಸೂರು- 47,780 ರೂ. ಇದೆ.

ಇದನ್ನೂ ಓದಿ: Gold Price Today: ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ. ಬೆಳ್ಳಿ ದರ ಇಂದು 350 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,190 ರೂ, ಮುಂಬೈ- 52,080 ರೂ, ದೆಹಲಿ- 52,110 ರೂ, ಕೊಲ್ಕತ್ತಾ- 52,110 ರೂ, ಬೆಂಗಳೂರು- 52,110 ರೂ, ಹೈದರಾಬಾದ್- 52,110 ರೂ, ಕೇರಳ- 52,080 ರೂ, ಪುಣೆ- 52,130 ರೂ, ಮಂಗಳೂರು- 52,110 ರೂ, ಮೈಸೂರು- 52,110 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆಯಲ್ಲಿ ಇಂದು 100 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,900 ರೂ. ಇದ್ದುದು ಇಂದು 61,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,300 ರೂ, ಮೈಸೂರು- 66,300 ರೂ., ಮಂಗಳೂರು- 66,300 ರೂ., ಮುಂಬೈ- 61,000 ರೂ, ಚೆನ್ನೈ- 66,300 ರೂ, ದೆಹಲಿ- 61,000 ರೂ, ಹೈದರಾಬಾದ್- 66,300 ರೂ, ಕೊಲ್ಕತ್ತಾ- 61,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Follow Us