AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 1,600 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಕೂಡ ಇಂದು ಭಾರೀ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 59,000 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 1,600 ರೂ. ಹೆಚ್ಚಳ
ಚಿನ್ನದ ಬೆಲೆImage Credit source: google
TV9 Web
| Edited By: |

Updated on: Aug 10, 2022 | 5:55 AM

Share

Gold Price on 10th August 2022 | ಬೆಂಗಳೂರು: ಭಾರತದಲ್ಲಿ ಕಳೆದೆರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು ಭಾರೀ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಇಂದು ದಾಖಲೆಯ ಏರಿಕೆ ಕಂಡಿದ್ದು, 1 ಕೆಜಿಗೆ 1,600 ರೂ. ಏರಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಳವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,550 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,870 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,800 ರೂ. ಮುಂಬೈ- 47,950 ರೂ, ದೆಹಲಿ- 48,100 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 47,980 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,240 ರೂ, ಮುಂಬೈ- 52,310 ರೂ, ದೆಹಲಿ- 52,470 ರೂ, ಕೊಲ್ಕತ್ತಾ- 52,310 ರೂ, ಬೆಂಗಳೂರು- 52,360 ರೂ, ಹೈದರಾಬಾದ್- 52,310 ರೂ, ಕೇರಳ- 52,310 ರೂ, ಪುಣೆ- 52,360 ರೂ, ಮಂಗಳೂರು- 52,360 ರೂ, ಮೈಸೂರು- 52,360 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ ಇಂದು ಭಾರೀ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 59,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,500 ರೂ, ಮೈಸೂರು- 64,500 ರೂ., ಮಂಗಳೂರು- 64,500 ರೂ., ಮುಂಬೈ- 59,000 ರೂ, ಚೆನ್ನೈ- 64,500 ರೂ, ದೆಹಲಿ- 59,000 ರೂ, ಹೈದರಾಬಾದ್- 64,500 ರೂ, ಕೊಲ್ಕತ್ತಾ- 59,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?