Gold Price on 10th August 2022 | ಬೆಂಗಳೂರು: ಭಾರತದಲ್ಲಿ ಕಳೆದೆರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು ಭಾರೀ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಇಂದು ದಾಖಲೆಯ ಏರಿಕೆ ಕಂಡಿದ್ದು, 1 ಕೆಜಿಗೆ 1,600 ರೂ. ಏರಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
ಭಾರತದಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಳವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,550 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,870 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,800 ರೂ. ಮುಂಬೈ- 47,950 ರೂ, ದೆಹಲಿ- 48,100 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 47,980 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಇದೆ.
ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ
ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 53,240 ರೂ, ಮುಂಬೈ- 52,310 ರೂ, ದೆಹಲಿ- 52,470 ರೂ, ಕೊಲ್ಕತ್ತಾ- 52,310 ರೂ, ಬೆಂಗಳೂರು- 52,360 ರೂ, ಹೈದರಾಬಾದ್- 52,310 ರೂ, ಕೇರಳ- 52,310 ರೂ, ಪುಣೆ- 52,360 ರೂ, ಮಂಗಳೂರು- 52,360 ರೂ, ಮೈಸೂರು- 52,360 ರೂ. ಆಗಿದೆ.
ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ ಕೂಡ ಇಂದು ಭಾರೀ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 59,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,500 ರೂ, ಮೈಸೂರು- 64,500 ರೂ., ಮಂಗಳೂರು- 64,500 ರೂ., ಮುಂಬೈ- 59,000 ರೂ, ಚೆನ್ನೈ- 64,500 ರೂ, ದೆಹಲಿ- 59,000 ರೂ, ಹೈದರಾಬಾದ್- 64,500 ರೂ, ಕೊಲ್ಕತ್ತಾ- 59,000 ರೂ. ಆಗಿದೆ.