AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ ದಾಖಲೆಯ ಏರಿಕೆ; 10 ಗ್ರಾಂಗೆ 1,310 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು 400 ರೂ. ಹೆಚ್ಚಳವಾಗಿದೆ. ಇಂದು ಒಂದೇ ದಿನದಲ್ಲಿ ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆ 1,310 ರೂ. ಹೆಚ್ಚಳವಾಗಿದೆ!

Gold Price Today: ಒಂದೇ ದಿನದಲ್ಲಿ ಚಿನ್ನದ ಬೆಲೆ ದಾಖಲೆಯ ಏರಿಕೆ; 10 ಗ್ರಾಂಗೆ 1,310 ರೂ. ಹೆಚ್ಚಳ
ಸಾಂಂದರ್ಭಿಕ ಚಿತ್ರ
TV9 Web
| Edited By: |

Updated on: Jul 02, 2022 | 5:47 AM

Share

ಬೆಂಗಳೂರು: ಕಳೆದ 2 ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ದಾಖಲೆಯ ಏರಿಕೆ ಕಂಡಿದೆ. ಇಂದು ಒಂದೇ ದಿನದಲ್ಲಿ ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆ (Gold Rate) 1,310 ರೂ. ಹೆಚ್ಚಳವಾಗಿದೆ! 1 ಕೆಜಿ ಚಿನ್ನಕ್ಕೆ ಬರೋಬ್ಬರಿ 13,100 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 400 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಇದ್ದುದು 52,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,850 ರೂ. ಮುಂಬೈ- 47,850 ರೂ, ದೆಹಲಿ- 47,850 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 47,900 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,900 ರೂ, ಮಂಗಳೂರು- 47,850 ರೂ, ಮೈಸೂರು- 47,850 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,200 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,250 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,250 ರೂ, ಮಂಗಳೂರು- 52,200 ರೂ, ಮೈಸೂರು- 52,200 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 400 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 58,600 ರೂ. ಇದ್ದುದು ಇಂದು 59,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,000 ರೂ, ಮೈಸೂರು- 65,000 ರೂ., ಮಂಗಳೂರು- 65,000 ರೂ., ಮುಂಬೈ- 59,000 ರೂ, ಚೆನ್ನೈ- 65,000 ರೂ, ದೆಹಲಿ- 59,000 ರೂ, ಹೈದರಾಬಾದ್- 65,000 ರೂ, ಕೊಲ್ಕತ್ತಾ- 59,000 ರೂ. ಆಗಿದೆ.

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ