AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಒಂದೇ ದಿನದಲ್ಲಿ ಬೆಳ್ಳಿ ಬೆಲೆ 1,000 ರೂ. ಕುಸಿತ; ಬೆಂಗಳೂರು ಸೇರಿ ವಿವಿಧ ನಗರಗಳ ಚಿನ್ನದ ದರ ಹೀಗಿದೆ

Gold Rate on March 9: ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ. ಹೈದರಾಬಾದ್, ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

Gold Price Today: ಒಂದೇ ದಿನದಲ್ಲಿ ಬೆಳ್ಳಿ ಬೆಲೆ 1,000 ರೂ. ಕುಸಿತ; ಬೆಂಗಳೂರು ಸೇರಿ ವಿವಿಧ ನಗರಗಳ ಚಿನ್ನದ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Mar 09, 2022 | 6:04 AM

Share

ಭಾರತದಲ್ಲಿ ಬಂಗಾರದ ಬೆಲೆ ಹೆಚ್ಚುತ್ತಲೇ ಇದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಎರಡು ದಿನಗಳಿಂದ ಚಿನ್ನದ ದರ (Gold Rate) ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ ಚಿನ್ನದ ಬೆಲೆ ಹೊಸ ದಾಖಲೆ ಬರೆದಿದ್ದು, 10 ಗ್ರಾಂ ಬಂಗಾರದ ಬೆಲೆ 1,090 ರೂ. ಏರಿಕೆಯಾಗಿತ್ತು. ಹಲವು ರಾಜ್ಯಗಳಲ್ಲಿ ಬೆಳ್ಳಿಯ ಬೆಲೆ 1 ಕೆಜಿಗೆ 75,000 ದಾಟುವ ಮೂಲಕ ದಾಖಲೆ ನಿರ್ಮಿಸಿದೆ. ಇನ್ನೊಂದೆಡೆ ಬೆಳ್ಳಿಯ ಬೆಲೆ (Silver Price) ನಿನ್ನೆಗಿಂತಲೂ ಇಂದು 1,000 ರೂ. ಕುಸಿತ ಕಂಡಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ. ಹೈದರಾಬಾದ್, ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಮೂರ್ನಾಲ್ಕು ದಿನಗಳಿಂದ ಹೆಚ್ಚುತ್ತಲೇ ಇದೆ. 2 ದಿನಗಳ ಹಿಂದೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,400 ರೂ. ಇದ್ದುದು ನಿನ್ನೆಯಿಂದ 49,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,800 ರೂ. ಇದ್ದುದು 53,890 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,200 ರೂ. ಮುಂಬೈ- 49,400 ರೂ, ದೆಹಲಿ- 49,400 ರೂ, ಕೊಲ್ಕತ್ತಾ- 49,400 ರೂ, ಬೆಂಗಳೂರು- 49,400 ರೂ, ಹೈದರಾಬಾದ್- 49,400 ರೂ, ಕೇರಳ- 49,400 ರೂ, ಪುಣೆ- 49,490 ರೂ, ಮಂಗಳೂರು- 49,400 ರೂ, ಮೈಸೂರು- 49,400 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 54,760 ರೂ, ಮುಂಬೈ- 53,890 ರೂ, ದೆಹಲಿ- 53,890 ರೂ, ಕೊಲ್ಕತ್ತಾ- 53,890 ರೂ, ಬೆಂಗಳೂರು- 53,890 ರೂ, ಹೈದರಾಬಾದ್- 53,890 ರೂ, ಕೇರಳ- 53,890 ರೂ, ಪುಣೆ- 53,960 ರೂ, ಮಂಗಳೂರು- 53,890 ರೂ, ಮೈಸೂರು- 53,890 ರೂ. ಇದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಇಂದು ಕೊಂಚ ಇಳಿಕೆಯಾಗಿದೆ. ನಿನ್ನೆಗಿಂತ ಇಂದು 1 ಕೆಜಿ ಬೆಳ್ಳಿಗೆ 1,000 ರೂ. ಕಡಿಮೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿ ದರ 71,000 ರೂ. ಇದ್ದುದು 70,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 74,600 ರೂ, ಮೈಸೂರು- 74,600 ರೂ., ಮಂಗಳೂರು- 74,600 ರೂ., ಮುಂಬೈ- 70,000 ರೂ, ಚೆನ್ನೈ- 74,600 ರೂ, ದೆಹಲಿ- 70,000 ರೂ, ಹೈದರಾಬಾದ್- 74,600 ರೂ, ಕೊಲ್ಕತ್ತಾ- 70,000 ರೂ. ಇದೆ.

ಇದನ್ನೂ ಓದಿ: Gold Price Today: ಹೊಸ ದಾಖಲೆ ಬರೆದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ 75,000 ರೂ. ದಾಟಿದ ಬೆಳ್ಳಿ ದರ

Gold Price Today: ಒಂದೇ ದಿನದಲ್ಲಿ 2,000 ರೂ. ಏರಿಕೆ ಕಂಡ ಬೆಳ್ಳಿ ದರ; ಚಿನ್ನದ ಬೆಲೆಯೂ ಮತ್ತೆ ಹೆಚ್ಚಳ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ