AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ಬೆಲೆ ಒಂದೇ ದಿನದಲ್ಲಿ 5,300 ರೂ. ಕುಸಿತ; ಇಂದಿನ ಚಿನ್ನದ ದರ ಎಷ್ಟು?

Silver Price Today: ನಿನ್ನೆ ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 4,100 ರೂ. ಏರಿಕೆ ಕಂಡಿತ್ತು. ಇಂದು ಬೆಳ್ಳಿ ದರ ದಾಖಲೆಯ ಇಳಿಕೆ ಕಂಡಿದ್ದು, 1 ಕೆಜಿಗೆ 5,300 ರೂ. ಕುಸಿತವಾಗಿದೆ.

Gold Price Today: ಬೆಳ್ಳಿ ಬೆಲೆ ಒಂದೇ ದಿನದಲ್ಲಿ 5,300 ರೂ. ಕುಸಿತ; ಇಂದಿನ ಚಿನ್ನದ ದರ ಎಷ್ಟು?
ಬೆಳ್ಳಿ ಬೆಲೆ
TV9 Web
| Edited By: |

Updated on: Apr 01, 2022 | 5:55 AM

Share

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ ಏರಿಳಿತವಾಗುತ್ತಲೇ ಇದೆ. ಇಂದು ಬಂಗಾರದ ಬೆಲೆ (Gold Rate)ಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನಿನ್ನೆ 4,100 ರೂ. ಏರಿಕೆ ಕಂಡಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 5,300 ರೂ. ಕುಸಿತ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,930 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,700 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,290 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೆ ಬೆಳ್ಳಿ ಬೆಲೆ (Silver Price) ಭಾರೀ ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 4,100 ರೂ. ಏರಿಕೆ ಕಂಡಿತ್ತು. ಇಂದು ಬೆಳ್ಳಿ ದರ ದಾಖಲೆಯ ಇಳಿಕೆ ಕಂಡಿದ್ದು, 1 ಕೆಜಿಗೆ 5,300 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 72,100 ರೂ. ಇದ್ದುದು ಇಂದು 66,800 ರೂ.ಗೆ ಇಳಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 71,300 ರೂ, ಮೈಸೂರು- 71,300 ರೂ., ಮಂಗಳೂರು- 71,300 ರೂ., ಮುಂಬೈ- 66,800 ರೂ, ಚೆನ್ನೈ- 71,300 ರೂ, ದೆಹಲಿ- 66,800 ರೂ, ಹೈದರಾಬಾದ್- 71,300 ರೂ, ಕೊಲ್ಕತ್ತಾ- 66,800 ರೂ. ಆಗಿದೆ.

ಇದನ್ನೂ ಓದಿ: Gold Price Today: ಬೆಳ್ಳಿ ಬೆಲೆ ಒಂದೇ ದಿನದಲ್ಲಿ 1,100 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಎಷ್ಟಿದೆ?

Gold Price Today: ಮೂರ್ನಾಲ್ಕು ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ