AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರ ಮತ್ತೆ ಕುಸಿತ

Silver Price Today: ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 48,990 ರೂ. ಇದ್ದುದು 48,450 ರೂ. ಆಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 450 ರೂ. ಕುಸಿತವಾಗಿದೆ.

Gold Price Today: ಇಂದು ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರ ಮತ್ತೆ ಕುಸಿತ
ಚಿನ್ನದ ಬೆಲೆ
TV9 Web
| Edited By: |

Updated on: Apr 28, 2022 | 6:04 AM

Share

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತಗಳು ಆಗುತ್ತಿದ್ದರೂ ಇಂದು ಯಾವುದೇ ಬದಲಾವಣೆಯಾಗಿಲ್ಲ. ಇಂದು ಚಿನ್ನದ ದರ (Gold Rate) ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 450 ರೂ. ಇಳಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 48,990 ರೂ. ಇದ್ದುದು 48,450 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,440 ರೂ. ಇದ್ದುದು 52,860 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,810 ರೂ. ಮುಂಬೈ- 48,450 ರೂ, ದೆಹಲಿ- 48,450 ರೂ, ಕೊಲ್ಕತ್ತಾ- 48,450 ರೂ, ಬೆಂಗಳೂರು- 48,450 ರೂ, ಹೈದರಾಬಾದ್- 48,450 ರೂ, ಕೇರಳ- 48,450 ರೂ, ಪುಣೆ- 48,500 ರೂ, ಮಂಗಳೂರು- 48,450 ರೂ, ಮೈಸೂರು- 48,450 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,250 ರೂ, ಮುಂಬೈ- 52,860 ರೂ, ದೆಹಲಿ- 52,860 ರೂ, ಕೊಲ್ಕತ್ತಾ- 52,860 ರೂ, ಬೆಂಗಳೂರು- 52,860 ರೂ, ಹೈದರಾಬಾದ್- 52,860 ರೂ, ಕೇರಳ- 52,860 ರೂ, ಪುಣೆ- 52,910 ರೂ, ಮಂಗಳೂರು- 52,860 ರೂ, ಮೈಸೂರು- 52,860 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ (Silver Price) ಭಾರೀ ಇಳಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 450 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 65,450 ರೂ. ಇದ್ದುದು ಇಂದು 65,000 ರೂ.ಗೆ ಇಳಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 70,000 ರೂ, ಮೈಸೂರು- 70,000 ರೂ., ಮಂಗಳೂರು- 70,000 ರೂ., ಮುಂಬೈ- 65,000 ರೂ, ಚೆನ್ನೈ- 70,000 ರೂ, ದೆಹಲಿ- 65,000 ರೂ, ಹೈದರಾಬಾದ್- 70,000 ರೂ, ಕೊಲ್ಕತ್ತಾ- 65,000 ರೂ. ಆಗಿದೆ.

ಇದನ್ನೂ ಓದಿ: Gold Price Today: ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರವೂ ಇಳಿಕೆ

Gold Price Today: ಇಂದು ಚಿನ್ನದ ಬೆಲೆ ಕೊಂಚ ಇಳಿಕೆ, ಬೆಳ್ಳಿ ದರ ಸ್ಥಿರ

Follow Us
TV9 Web
TV9 Web

TV9 Kannada

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ