AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಇಳಿಕೆ

ಬೆಳ್ಳಿ ಬೆಲೆ ಇಂದು ಕೂಡ ಕೊಂಚ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 55,600 ರೂ. ಇದ್ದುದು ಇಂದು 55,400 ರೂ. ಆಗಿದೆ.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 23, 2022 | 5:46 AM

Share

Gold Price on 23 July 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆ 440 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ನಿನ್ನೆ 300 ರೂ. ಕುಸಿತವಾಗಿತ್ತು. ಇಂದು ಮತ್ತೆ ಬೆಳ್ಳಿ ದರದಲ್ಲಿ 200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಇದ್ದುದು 46,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,180 ರೂ. ಇದ್ದುದು 50,620 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,660 ರೂ. ಮುಂಬೈ- 46,400 ರೂ, ದೆಹಲಿ- 46,400 ರೂ, ಕೊಲ್ಕತ್ತಾ- 46,400 ರೂ, ಬೆಂಗಳೂರು- 46,450 ರೂ, ಹೈದರಾಬಾದ್- 46,400 ರೂ, ಕೇರಳ- 46,400 ರೂ, ಪುಣೆ- 46,420 ರೂ, ಮಂಗಳೂರು- 46,450 ರೂ, ಮೈಸೂರು- 46,450 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರವೂ 300 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,900 ರೂ, ಮುಂಬೈ- 50,620 ರೂ, ದೆಹಲಿ- 50,620 ರೂ, ಕೊಲ್ಕತ್ತಾ- 50,620 ರೂ, ಬೆಂಗಳೂರು- 50,670 ರೂ, ಹೈದರಾಬಾದ್- 50,620 ರೂ, ಕೇರಳ- 50,620 ರೂ, ಪುಣೆ- 50,640 ರೂ, ಮಂಗಳೂರು- 50,670 ರೂ, ಮೈಸೂರು- 50,670 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಕೂಡ ಕೊಂಚ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 55,600 ರೂ. ಇದ್ದುದು ಇಂದು 55,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,600 ರೂ, ಮೈಸೂರು- 61,600 ರೂ., ಮಂಗಳೂರು- 61,600 ರೂ., ಮುಂಬೈ- 55,400 ರೂ, ಚೆನ್ನೈ- 61,600 ರೂ, ದೆಹಲಿ- 55,400 ರೂ, ಹೈದರಾಬಾದ್- 61,600 ರೂ, ಕೊಲ್ಕತ್ತಾ- 55,400 ರೂ. ಆಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ