Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಇಳಿಕೆ

ಬೆಳ್ಳಿ ಬೆಲೆ ಇಂದು ಕೂಡ ಕೊಂಚ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 55,600 ರೂ. ಇದ್ದುದು ಇಂದು 55,400 ರೂ. ಆಗಿದೆ.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಇಳಿಕೆ
ಸಾಂದರ್ಭಿಕ ಚಿತ್ರ
Edited By:

Updated on: Jul 23, 2022 | 5:46 AM

Gold Price on 23 July 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆ 440 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ನಿನ್ನೆ 300 ರೂ. ಕುಸಿತವಾಗಿತ್ತು. ಇಂದು ಮತ್ತೆ ಬೆಳ್ಳಿ ದರದಲ್ಲಿ 200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಇದ್ದುದು 46,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,180 ರೂ. ಇದ್ದುದು 50,620 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,660 ರೂ. ಮುಂಬೈ- 46,400 ರೂ, ದೆಹಲಿ- 46,400 ರೂ, ಕೊಲ್ಕತ್ತಾ- 46,400 ರೂ, ಬೆಂಗಳೂರು- 46,450 ರೂ, ಹೈದರಾಬಾದ್- 46,400 ರೂ, ಕೇರಳ- 46,400 ರೂ, ಪುಣೆ- 46,420 ರೂ, ಮಂಗಳೂರು- 46,450 ರೂ, ಮೈಸೂರು- 46,450 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರವೂ 300 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 50,900 ರೂ, ಮುಂಬೈ- 50,620 ರೂ, ದೆಹಲಿ- 50,620 ರೂ, ಕೊಲ್ಕತ್ತಾ- 50,620 ರೂ, ಬೆಂಗಳೂರು- 50,670 ರೂ, ಹೈದರಾಬಾದ್- 50,620 ರೂ, ಕೇರಳ- 50,620 ರೂ, ಪುಣೆ- 50,640 ರೂ, ಮಂಗಳೂರು- 50,670 ರೂ, ಮೈಸೂರು- 50,670 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆ ಇಂದು ಕೂಡ ಕೊಂಚ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 55,600 ರೂ. ಇದ್ದುದು ಇಂದು 55,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,600 ರೂ, ಮೈಸೂರು- 61,600 ರೂ., ಮಂಗಳೂರು- 61,600 ರೂ., ಮುಂಬೈ- 55,400 ರೂ, ಚೆನ್ನೈ- 61,600 ರೂ, ದೆಹಲಿ- 55,400 ರೂ, ಹೈದರಾಬಾದ್- 61,600 ರೂ, ಕೊಲ್ಕತ್ತಾ- 55,400 ರೂ. ಆಗಿದೆ.

TV9 Web

TV9 Kannada

Read More
Loading...
Unable to load recommendations.
Follow Us