Gold Price Today: ಭಾರತದಲ್ಲಿ ಚಿನ್ನದ ಬೆಲೆ 270 ರೂ. ಹೆಚ್ಚಳ; ಬೆಳ್ಳಿ ದರ ಕೊಂಚ ಏರಿಕೆ

Silver Price Today: ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,700 ರೂ. ಇದ್ದುದು 47,950 ರೂ. ಆಗಿದೆ.

Gold Price Today: ಭಾರತದಲ್ಲಿ ಚಿನ್ನದ ಬೆಲೆ 270 ರೂ. ಹೆಚ್ಚಳ; ಬೆಳ್ಳಿ ದರ ಕೊಂಚ ಏರಿಕೆ
ಚಿನ್ನದ ಬೆಲೆ
Edited By:

Updated on: Jun 10, 2022 | 5:50 AM

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಇಂದು ಮತ್ತೆ ಚಿನ್ನದ ದರ 270 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 100 ರೂ. ಏರಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,700 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,040 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,060 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 47,800 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ. (Source)

ಇದನ್ನೂ ಓದಿ: Gold- Silver Price: ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ಕಡೆ ಜೂನ್ 8ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,430 ರೂ, ಮುಂಬೈ- 52,310 ರೂ, ದೆಹಲಿ- 52,310 ರೂ, ಕೊಲ್ಕತ್ತಾ- 52,310 ರೂ, ಬೆಂಗಳೂರು- 52,310 ರೂ, ಹೈದರಾಬಾದ್- 52,310 ರೂ, ಕೇರಳ- 52,310 ರೂ, ಪುಣೆ- 52,360 ರೂ, ಮಂಗಳೂರು- 52,310 ರೂ, ಮೈಸೂರು- 52,310 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,100 ರೂ. ಇದ್ದುದು ಇಂದು 62,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 68,000 ರೂ, ಮೈಸೂರು- 68,000 ರೂ., ಮಂಗಳೂರು- 68,000 ರೂ., ಮುಂಬೈ- 62,200 ರೂ, ಚೆನ್ನೈ- 68,000 ರೂ, ದೆಹಲಿ- 62,200 ರೂ, ಹೈದರಾಬಾದ್- 68,000 ರೂ, ಕೊಲ್ಕತ್ತಾ- 62,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Follow Us