AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 200 ರೂ. ಏರಿಕೆ

Silver Price Today: ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ.

Gold Price Today: ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 200 ರೂ. ಏರಿಕೆ
ಚಿನ್ನದ ಬೆಲೆImage Credit source: Economic Times
TV9 Web
| Edited By: |

Updated on: Jun 16, 2022 | 5:48 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ (Gold Rate) ಬರೋಬ್ಬರಿ 1,050 ರೂ. ಕುಸಿತವಾಗಿತ್ತು. ಇಂದು ಮತ್ತೆ 10 ಗ್ರಾಂ ಚಿನ್ನಕ್ಕೆ 270 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 200 ರೂ. ಏರಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,400 ರೂ. ಇದ್ದುದು 47,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,710 ರೂ. ಇದ್ದುದು 51,440 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,200 ರೂ. ಮುಂಬೈ- 47,150 ರೂ, ದೆಹಲಿ- 47,170 ರೂ, ಕೊಲ್ಕತ್ತಾ- 47,150 ರೂ, ಬೆಂಗಳೂರು- 47,170 ರೂ, ಹೈದರಾಬಾದ್- 47,150 ರೂ, ಕೇರಳ- 47,150 ರೂ, ಪುಣೆ- 47,220 ರೂ, ಮಂಗಳೂರು- 47,170 ರೂ, ಮೈಸೂರು- 47,170 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಇಂದು ಗಣನೀಯ ಹೆಚ್ಚಳ; ಬೆಳ್ಳಿ ಬೆಲೆ 1,000 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,500 ರೂ, ಮುಂಬೈ- 51,440 ರೂ, ದೆಹಲಿ- 51,440 ರೂ, ಕೊಲ್ಕತ್ತಾ- 51,440 ರೂ, ಬೆಂಗಳೂರು- 51,440 ರೂ, ಹೈದರಾಬಾದ್- 51,440 ರೂ, ಕೇರಳ- 51,440 ರೂ, ಪುಣೆ- 51,510 ರೂ, ಮಂಗಳೂರು- 51,440 ರೂ, ಮೈಸೂರು- 51,440 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ನಿನ್ನೆ ಬರೋಬ್ಬರಿ 1,700 ರೂ. ಇಳಿಕೆಯಾಗಿತ್ತು. ಇಂದು 1 ಕೆಜಿ ಬೆಳ್ಳಿಗೆ 200 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,800 ರೂ. ಇದ್ದುದು ಇಂದು 60,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,000 ರೂ, ಚೆನ್ನೈ- 66,000 ರೂ, ದೆಹಲಿ- 60,000 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ