Gold Price Today: ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 200 ರೂ. ಏರಿಕೆ

Silver Price Today: ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ.

Gold Price Today: ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 200 ರೂ. ಏರಿಕೆ
ಚಿನ್ನದ ಬೆಲೆ
Image Credit source: Economic Times
Edited By:

Updated on: Jun 16, 2022 | 5:48 AM

ಬೆಂಗಳೂರು: ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ (Gold Rate) ಬರೋಬ್ಬರಿ 1,050 ರೂ. ಕುಸಿತವಾಗಿತ್ತು. ಇಂದು ಮತ್ತೆ 10 ಗ್ರಾಂ ಚಿನ್ನಕ್ಕೆ 270 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 200 ರೂ. ಏರಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,400 ರೂ. ಇದ್ದುದು 47,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,710 ರೂ. ಇದ್ದುದು 51,440 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,200 ರೂ. ಮುಂಬೈ- 47,150 ರೂ, ದೆಹಲಿ- 47,170 ರೂ, ಕೊಲ್ಕತ್ತಾ- 47,150 ರೂ, ಬೆಂಗಳೂರು- 47,170 ರೂ, ಹೈದರಾಬಾದ್- 47,150 ರೂ, ಕೇರಳ- 47,150 ರೂ, ಪುಣೆ- 47,220 ರೂ, ಮಂಗಳೂರು- 47,170 ರೂ, ಮೈಸೂರು- 47,170 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಇಂದು ಗಣನೀಯ ಹೆಚ್ಚಳ; ಬೆಳ್ಳಿ ಬೆಲೆ 1,000 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 51,500 ರೂ, ಮುಂಬೈ- 51,440 ರೂ, ದೆಹಲಿ- 51,440 ರೂ, ಕೊಲ್ಕತ್ತಾ- 51,440 ರೂ, ಬೆಂಗಳೂರು- 51,440 ರೂ, ಹೈದರಾಬಾದ್- 51,440 ರೂ, ಕೇರಳ- 51,440 ರೂ, ಪುಣೆ- 51,510 ರೂ, ಮಂಗಳೂರು- 51,440 ರೂ, ಮೈಸೂರು- 51,440 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆಯಲ್ಲಿ ನಿನ್ನೆ ಬರೋಬ್ಬರಿ 1,700 ರೂ. ಇಳಿಕೆಯಾಗಿತ್ತು. ಇಂದು 1 ಕೆಜಿ ಬೆಳ್ಳಿಗೆ 200 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,800 ರೂ. ಇದ್ದುದು ಇಂದು 60,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,000 ರೂ, ಚೆನ್ನೈ- 66,000 ರೂ, ದೆಹಲಿ- 60,000 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us