AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ; ಬೆಳ್ಳಿ ದರ 100 ರೂ. ಕುಸಿತ

Gold and Silver Price Today in Bengaluru: ಬೆಳ್ಳಿ ಬೆಲೆಯಲ್ಲಿ ಇಂದು 100 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,000 ರೂ. ಇದ್ದುದು ಇಂದು 60,900 ರೂ. ಆಗಿದೆ.

Gold Price Today: 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ; ಬೆಳ್ಳಿ ದರ 100 ರೂ. ಕುಸಿತ
ಚಿನ್ನImage Credit source: Live Mint
TV9 Web
| Edited By: |

Updated on:Jun 20, 2022 | 9:06 AM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಚಿನ್ನದ ಬೆಲೆ ಯಾವುದೇ ಬದಲಾವಣೆ ಆಗಿಲ್ಲ. ಭಾರತದಲ್ಲಿ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 100 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,750 ರೂ. ಮುಂಬೈ- 47,650 ರೂ, ದೆಹಲಿ- 47,680 ರೂ, ಕೊಲ್ಕತ್ತಾ- 47,680 ರೂ, ಬೆಂಗಳೂರು- 47,680 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,700 ರೂ, ಮಂಗಳೂರು- 47,680 ರೂ, ಮೈಸೂರು- 47,680 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಇಂದು ಚಿನ್ನದ ಬೆಲೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,090 ರೂ, ಮುಂಬೈ- 51,980 ರೂ, ದೆಹಲಿ- 52,010 ರೂ, ಕೊಲ್ಕತ್ತಾ- 52,010 ರೂ, ಬೆಂಗಳೂರು- 52,010 ರೂ, ಹೈದರಾಬಾದ್- 52,010 ರೂ, ಕೇರಳ- 52,980 ರೂ, ಪುಣೆ- 52,030 ರೂ, ಮಂಗಳೂರು- 52,010 ರೂ, ಮೈಸೂರು- 52,010 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು 100 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,000 ರೂ. ಇದ್ದುದು ಇಂದು 60,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,300 ರೂ, ಮೈಸೂರು- 66,300 ರೂ., ಮಂಗಳೂರು- 66,300 ರೂ., ಮುಂಬೈ- 60,900 ರೂ, ಚೆನ್ನೈ- 66,300 ರೂ, ದೆಹಲಿ- 60,900 ರೂ, ಹೈದರಾಬಾದ್- 66,300 ರೂ, ಕೊಲ್ಕತ್ತಾ- 60,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Mon, 20 June 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ