Gold Price Today: ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರವೂ 500 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 500 ರೂ. ಕುಸಿತವಾಗಿದೆ. ಭಾರತದಲ್ಲಿ 2 ದಿನಗಳಿಂದ 1 ಕೆಜಿ ಬೆಳ್ಳಿಯ ದರ 61,000 ರೂ. ಇದ್ದುದು ಇಂದು 60,500 ರೂ. ಆಗಿದೆ.

Gold Price Today: ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರವೂ 500 ರೂ. ಇಳಿಕೆ
ಚಿನ್ನದ ಬೆಲೆImage Credit source: Zee News
Follow us
| Updated By: ಸುಷ್ಮಾ ಚಕ್ರೆ

Updated on: Jun 23, 2022 | 5:44 AM

ಬೆಂಗಳೂರು: ಭಾರತದಲ್ಲಿ ನಿನ್ನೆ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ 220 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 500 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,450 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 51,760 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,550 ರೂ. ಮುಂಬೈ- 47,450 ರೂ, ದೆಹಲಿ- 47,480 ರೂ, ಕೊಲ್ಕತ್ತಾ- 47,480 ರೂ, ಬೆಂಗಳೂರು- 47,480 ರೂ, ಹೈದರಾಬಾದ್- 47,450 ರೂ, ಕೇರಳ- 47,450 ರೂ, ಪುಣೆ- 47,500 ರೂ, ಮಂಗಳೂರು- 47,480 ರೂ, ಮೈಸೂರು- 47,480 ರೂ. ಇದೆ.

ಇದನ್ನೂ ಓದಿ: Gold Price Today: 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ; ಬೆಳ್ಳಿ ದರ 100 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,860 ರೂ, ಮುಂಬೈ- 51,760 ರೂ, ದೆಹಲಿ- 51,800 ರೂ, ಕೊಲ್ಕತ್ತಾ- 51,800 ರೂ, ಬೆಂಗಳೂರು- 51,800 ರೂ, ಹೈದರಾಬಾದ್- 51,760 ರೂ, ಕೇರಳ- 51,760 ರೂ, ಪುಣೆ- 51,760 ರೂ, ಮಂಗಳೂರು- 51,800 ರೂ, ಮೈಸೂರು- 51,800 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 500 ರೂ. ಕುಸಿತವಾಗಿದೆ. ಭಾರತದಲ್ಲಿ 2 ದಿನಗಳಿಂದ 1 ಕೆಜಿ ಬೆಳ್ಳಿಯ ದರ 61,000 ರೂ. ಇದ್ದುದು ಇಂದು 60,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,500 ರೂ, ಚೆನ್ನೈ- 66,000 ರೂ, ದೆಹಲಿ- 60,500 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ