Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಹೆಚ್ಚಳ; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಬೆಳ್ಳಿ ದರ
Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,400 ರೂ. ಇದ್ದುದು 47,500 ರೂ. ಆಗಿದೆ. ಇಂದು ಕೂಡ ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತವಾಗಿಲ್ಲ.
ಬೆಂಗಳೂರು: ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ಚಿನ್ನದ ಬೆಲೆ (Gold Price) ಇಂದು 100 ರೂ. ಹೆಚ್ಚಳವಾಗಿದೆ. ಆದರೆ, ಬೆಳ್ಳಿಯ ಬೆಲೆ (Silver Price) ಕಳೆದ 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,400 ರೂ. ಇದ್ದುದು 47,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,710 ರೂ. ಇದ್ದುದು 51,810 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,590 ರೂ. ಮುಂಬೈ- 47,500 ರೂ, ದೆಹಲಿ- 47,500 ರೂ, ಕೊಲ್ಕತ್ತಾ- 47,500 ರೂ, ಬೆಂಗಳೂರು- 47,500 ರೂ, ಹೈದರಾಬಾದ್- 47,500 ರೂ, ಕೇರಳ- 47,500 ರೂ, ಪುಣೆ- 47,580 ರೂ, ಮಂಗಳೂರು- 47,500 ರೂ, ಮೈಸೂರು- 47,500 ರೂ. ಇದೆ. (Source)
ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,000 ರೂ, ಮುಂಬೈ- 51,810 ರೂ, ದೆಹಲಿ- 51,810 ರೂ, ಕೊಲ್ಕತ್ತಾ- 51,810 ರೂ, ಬೆಂಗಳೂರು- 51,810 ರೂ, ಹೈದರಾಬಾದ್- 51,810 ರೂ, ಕೇರಳ- 51,810 ರೂ, ಪುಣೆ- 51,890 ರೂ, ಮಂಗಳೂರು- 51,810 ರೂ, ಮೈಸೂರು- 51,810 ರೂ. ಆಗಿದೆ.
ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ.
ಇಂದಿನ ಬೆಳ್ಳಿಯ ದರ: ಇಂದು ಕೂಡ ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತವಾಗಿಲ್ಲ. ಭಾರತದಲ್ಲಿ 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 62,300 ರೂ. ಇದ್ದುದು ಇಂದು 62,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,500 ರೂ, ಮೈಸೂರು- 66,500 ರೂ., ಮಂಗಳೂರು- 66,500 ರೂ., ಮುಂಬೈ- 62,500 ರೂ, ಚೆನ್ನೈ- 66,500 ರೂ, ದೆಹಲಿ- 62,500 ರೂ, ಹೈದರಾಬಾದ್- 66,500 ರೂ, ಕೊಲ್ಕತ್ತಾ- 62,500 ರೂ. ಆಗಿದೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ