AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಗಣನೀಯ ಕುಸಿತ; ಬೆಳ್ಳಿ ದರದಲ್ಲಿ 1,500 ರೂ. ಇಳಿಕೆ

Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,000 ರೂ. ಆಗಿದೆ. ಇಂದು ಕೂಡ ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಗಣನೀಯ ಕುಸಿತ; ಬೆಳ್ಳಿ ದರದಲ್ಲಿ 1,500 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: May 12, 2022 | 6:01 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದು ಚಿನ್ನದ ಬೆಲೆ (Gold Price) ಭಾರೀ ಕುಸಿತವಾಗಿದೆ. ಚಿನ್ನದ ದರ ಇಂದು 10 ಗ್ರಾಂಗೆ 380 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 1,500 ರೂ. ಕುಸಿತ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,870 ರೂ. ಮುಂಬೈ- 46,750 ರೂ, ದೆಹಲಿ- 46,750 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,750 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,800 ರೂ, ಮಂಗಳೂರು- 46,750 ರೂ, ಮೈಸೂರು- 46,750 ರೂ. ಇದೆ. (Source)

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,220 ರೂ, ಮುಂಬೈ- 51,000 ರೂ, ದೆಹಲಿ- 51,000 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,000 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,080 ರೂ, ಮಂಗಳೂರು- 51,000 ರೂ, ಮೈಸೂರು- 51,000 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಇಂದು ದಾಖಲೆಯ 1,500 ರೂ. ಕುಸಿತ ಕಂಡಿದೆ.

ಇಂದಿನ ಬೆಳ್ಳಿಯ ದರ: ಇಂದು ಕೂಡ ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,900 ರೂ. ಇದ್ದುದು ಇಂದು 60,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,800 ರೂ, ಮೈಸೂರು- 64,800 ರೂ., ಮಂಗಳೂರು- 64,800 ರೂ., ಮುಂಬೈ- 60,400 ರೂ, ಚೆನ್ನೈ- 64,800 ರೂ, ದೆಹಲಿ- 60,400 ರೂ, ಹೈದರಾಬಾದ್- 64,800 ರೂ, ಕೊಲ್ಕತ್ತಾ- 60,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ