Gold Price Today: ನಿಮ್ಮ ಜಿಲ್ಲೆಯಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ?; ಇಲ್ಲಿದೆ ಮಾಹಿತಿ

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 47,400 ರೂ. ಆಗಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಕೂಡ ಯಾವುದೇ ಏರಿಳಿತವಾಗಿಲ್ಲ.

Gold Price Today: ನಿಮ್ಮ ಜಿಲ್ಲೆಯಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ?; ಇಲ್ಲಿದೆ ಮಾಹಿತಿ
ಚಿನ್ನದ ಬೆಲೆ
Edited By:

Updated on: May 09, 2022 | 6:01 AM

ಬೆಂಗಳೂರು: ನಿನ್ನೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಯಾವುದೇ ಏರಿಳಿತ ಕಂಡಿಲ್ಲ. ಚಿನ್ನದ ಬೆಲೆ ಇಂದು (Gold Price) ಯಥಾಸ್ಥಿತಿಯಲ್ಲಿದೆ. ಆದರೆ, ಬೆಳ್ಳಿಯ ಬೆಲೆ (Silver Price) ಇಂದು 200 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 47,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,710 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,770 ರೂ. ಮುಂಬೈ- 47,400 ರೂ, ದೆಹಲಿ- 47,400 ರೂ, ಕೊಲ್ಕತ್ತಾ- 47,400 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,400 ರೂ, ಕೇರಳ- 47,400 ರೂ, ಪುಣೆ- 47,550 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ. ಇದೆ. (Source)

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 53,200 ರೂ, ಮುಂಬೈ- 51,710 ರೂ, ದೆಹಲಿ- 51,710 ರೂ, ಕೊಲ್ಕತ್ತಾ- 51,710 ರೂ, ಬೆಂಗಳೂರು- 51,710 ರೂ, ಹೈದರಾಬಾದ್- 51,710 ರೂ, ಕೇರಳ- 51,710 ರೂ, ಪುಣೆ- 51,860 ರೂ, ಮಂಗಳೂರು- 51,710 ರೂ, ಮೈಸೂರು- 51,710 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ (Silver Price) ಕೂಡ ಯಥಾಸ್ಥತಿಯಲ್ಲಿದೆ.

ಇಂದಿನ ಬೆಳ್ಳಿಯ ದರ:
ಇಂದು ಬೆಳ್ಳಿ ಬೆಲೆಯಲ್ಲಿ ಕೂಡ ಯಾವುದೇ ಏರಿಳಿತವಾಗಿಲ್ಲ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 62,300 ರೂ. ಇದ್ದುದು ಇಂದು 62,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,800 ರೂ, ಮೈಸೂರು- 66,800 ರೂ., ಮಂಗಳೂರು- 66,800 ರೂ., ಮುಂಬೈ- 62,500 ರೂ, ಚೆನ್ನೈ- 66,800 ರೂ, ದೆಹಲಿ- 62,500 ರೂ, ಹೈದರಾಬಾದ್- 66,800 ರೂ, ಕೊಲ್ಕತ್ತಾ- 62,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us