AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ಬೆಲೆ 1 ಕೆಜಿಗೆ 300 ರೂ. ಕುಸಿತ; ಇಂದಿನ ಚಿನ್ನದ ದರ ಹೀಗಿದೆ

Silver Price Today: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 300 ರೂ. ಇಳಿಕೆ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

Gold Price Today: ಬೆಳ್ಳಿ ಬೆಲೆ 1 ಕೆಜಿಗೆ 300 ರೂ. ಕುಸಿತ; ಇಂದಿನ ಚಿನ್ನದ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Apr 06, 2022 | 6:03 AM

Share

ಬೆಂಗಳೂರು: ಭಾರತದಲ್ಲಿ ಮೂರ್ನಾಲ್ಕು ದಿನಗಳಿಂದ ಕುಸಿತವಾಗಿದ್ದ ಚಿನ್ನದ ಬೆಲೆ (Gold Prices) ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಚಿನ್ನದ ದರದಲ್ಲಿ (Gold Rate) ಇಂದು ಯಾವುದೇ ಏರಿಳಿತವಾಗಿಲ್ಲ. 3 ದಿನಗಳ ಹಿಂದೆ ಭಾರೀ ಹೆಚ್ಚಳವಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 300 ರೂ. ಇಳಿಕೆ ಕಂಡಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,460 ರೂ. ಇದ್ದುದು 52,140 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. 2 ದಿನಗಳ ಹಿಂದೆ ಚೆನ್ನೈ- 48,160 ರೂ. ಮುಂಬೈ- 47,800 ರೂ, ದೆಹಲಿ- 47,800 ರೂ, ಕೊಲ್ಕತ್ತಾ- 47,800 ರೂ, ಬೆಂಗಳೂರು- 47,800 ರೂ, ಹೈದರಾಬಾದ್- 47,800 ರೂ, ಕೇರಳ- 47,800 ರೂ, ಪುಣೆ- 47,850 ರೂ, ಮಂಗಳೂರು- 47,800 ರೂ, ಮೈಸೂರು- 47,800 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,540 ರೂ, ಮುಂಬೈ- 52,140 ರೂ, ದೆಹಲಿ- 52,140 ರೂ, ಕೊಲ್ಕತ್ತಾ- 52,140 ರೂ, ಬೆಂಗಳೂರು- 52,140 ರೂ, ಹೈದರಾಬಾದ್- 52,140 ರೂ, ಕೇರಳ- 52,140 ರೂ, ಪುಣೆ- 52,190 ರೂ, ಮಂಗಳೂರು- 52,140 ರೂ, ಮೈಸೂರು- 52,140 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಾಗಿಲ್ಲ. ಬೆಳ್ಳಿ ಬೆಲೆ (Silver Price) ಮಾತ್ರ ಕುಸಿತವಾಗುತ್ತಲೇ ಇದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 300 ರೂ. ಇಳಿಕೆ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 66,600 ರೂ. ಇದ್ದುದು ಇಂದು 66,300 ರೂ.ಗೆ ಕುಸಿತವಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 71,000 ರೂ, ಮೈಸೂರು- 71,000 ರೂ., ಮಂಗಳೂರು- 71,000 ರೂ., ಮುಂಬೈ- 66,300 ರೂ, ಚೆನ್ನೈ- 71,000 ರೂ, ದೆಹಲಿ- 66,300 ರೂ, ಹೈದರಾಬಾದ್- 71,000 ರೂ, ಕೊಲ್ಕತ್ತಾ- 66,300 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ; 1 ಕೆಜಿಗೆ 800 ರೂ. ಕುಸಿತ ಕಂಡ ಬೆಳ್ಳಿ ದರ

Gold Price Today: ಮತ್ತೆ ಚೇತರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ 71 ಸಾವಿರ ರೂ. ದಾಟಿದ ಬೆಳ್ಳಿ ದರ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ