AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಮತ್ತೆ ಹೆಚ್ಚಳ; ಬೆಳ್ಳಿ ದರವೂ 300 ರೂ. ಏರಿಕೆ

ಭಾರತದಲ್ಲಿ 3 ದಿನಗಳಿಂದ ಒಂದೇ ರೀತಿಯಲ್ಲಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 62,200 ರೂ. ಇದ್ದುದು ಇಂದು 62,500 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಮತ್ತೆ ಹೆಚ್ಚಳ; ಬೆಳ್ಳಿ ದರವೂ 300 ರೂ. ಏರಿಕೆ
ಚಿನ್ನದ ಬೆಲೆ
TV9 Web
| Edited By: |

Updated on: May 31, 2022 | 5:55 AM

Share

ಬೆಂಗಳೂರು: ಭಾರತದಲ್ಲಿ ಕಳೆದ 3 ದಿನಗಳಿಂದ ಚಿನ್ನದ ಬೆಲೆಯಲ್ಲಿ (Gold Rate) ಯಾವುದೇ ಬದಲಾವಣೆಯಾಗಿರಲಿಲ್ಲ. ಆದರೆ, ಇಂದು ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 300 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 3 ದಿನಗಳಿಂದ ಒಂದೇ ರೀತಿಯಲ್ಲಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,950 ರೂ. ಮುಂಬೈ- 47,850 ರೂ, ದೆಹಲಿ- 47,850 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 47,850 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,900 ರೂ, ಮಂಗಳೂರು- 47,850 ರೂ, ಮೈಸೂರು- 47,850 ರೂ. ಇದೆ. (Source)

ಇದನ್ನೂ ಓದಿ: Gold Price Today: 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಒಂದೇ ತರ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,310 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,200 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,240 ರೂ, ಮಂಗಳೂರು- 52,200 ರೂ, ಮೈಸೂರು- 52,200 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಕಳೆದ 2 ದಿನಗಳಿಂದ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಆದರೆ, ಇಂದು ಬೆಳ್ಳಿ ದರ 300 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,200 ರೂ. ಇದ್ದುದು ಇಂದು 62,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 62,500 ರೂ, ಚೆನ್ನೈ- 67,000 ರೂ, ದೆಹಲಿ- 62,500 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 62,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ