AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಂಗಳೂರಿನಲ್ಲಿ ದಾಖಲೆ ಬರೆದ ಬೆಳ್ಳಿ ದರ

Silver Price on March 10: ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 49,400 ರೂ. ಇದ್ದುದು ಇಂದು 49,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,890 ರೂ. ಇದ್ದುದು 54,330 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಂಗಳೂರಿನಲ್ಲಿ ದಾಖಲೆ ಬರೆದ ಬೆಳ್ಳಿ ದರ
ಚಿನ್ನದ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 10, 2022 | 6:08 AM

ಬೆಂಗಳೂರು: ಭಾರತದಲ್ಲಿ ಬಂಗಾರದ ಬೆಲೆಯ ಏರಿಳಿತ ನಡೆಯುತ್ತಲೇ ಇರುತ್ತದೆ. ಎರಡು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. 10 ಗ್ರಾಂ ಬಂಗಾರದ ಬೆಲೆ ಇಂದು 400 ರೂ. ಏರಿಕೆಯಾಗಿದೆ. ಹಲವು ರಾಜ್ಯಗಳಲ್ಲಿ ಬೆಳ್ಳಿಯ ಬೆಲೆ 1 ಕೆಜಿಗೆ 76,000 ದಾಟುವ ಮೂಲಕ ದಾಖಲೆ ನಿರ್ಮಿಸಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ (Silver Price) ನಿನ್ನೆಗಿಂತಲೂ ಇಂದು 1,200 ರೂ. ಏರಿಕೆ ಕಂಡಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ. ಹೈದರಾಬಾದ್, ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಎರಡು ದಿನಗಳಿಂದ ಏರಿಳಿತ ಕಂಡಿರಲಿಲ್ಲ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 49,400 ರೂ. ಇದ್ದುದು ಇಂದು 49,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,890 ರೂ. ಇದ್ದುದು 54,330 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,200 ರೂ. ಮುಂಬೈ- 49,800 ರೂ, ದೆಹಲಿ- 49,800 ರೂ, ಕೊಲ್ಕತ್ತಾ- 49,800 ರೂ, ಬೆಂಗಳೂರು- 49,800 ರೂ, ಹೈದರಾಬಾದ್- 49,800 ರೂ, ಕೇರಳ- 49,800 ರೂ, ಪುಣೆ- 49,830 ರೂ, ಮಂಗಳೂರು- 49,800 ರೂ, ಮೈಸೂರು- 49,800 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 54,770 ರೂ, ಮುಂಬೈ- 54,330 ರೂ, ದೆಹಲಿ- 54,330 ರೂ, ಕೊಲ್ಕತ್ತಾ- 54,330 ರೂ, ಬೆಂಗಳೂರು- 54,330 ರೂ, ಹೈದರಾಬಾದ್- 54,330 ರೂ, ಕೇರಳ- 54,330 ರೂ, ಪುಣೆ- 54,360 ರೂ, ಮಂಗಳೂರು- 54,330 ರೂ, ಮೈಸೂರು- 54,330 ರೂ. ಇದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಇಂದು ಭಾರೀ ಏರಿಕೆಯಾಗಿದೆ. ನಿನ್ನೆಗಿಂತ ಇಂದು 1 ಕೆಜಿ ಬೆಳ್ಳಿಗೆ 1,200 ರೂ. ಹೆಚ್ಚಳವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿ ದರ 70,000 ರೂ. ಇದ್ದುದು 71,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 76,700 ರೂ, ಮೈಸೂರು- 76,700 ರೂ., ಮಂಗಳೂರು- 76,700 ರೂ., ಮುಂಬೈ- 71,200 ರೂ, ಚೆನ್ನೈ- 76,700 ರೂ, ದೆಹಲಿ- 71,200 ರೂ, ಹೈದರಾಬಾದ್- 76,700 ರೂ, ಕೊಲ್ಕತ್ತಾ- 71,200 ರೂ. ಇದೆ.

ಇದನ್ನೂ ಓದಿ: Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 9ನೇ ತಾರೀಕಿನ ಚಿನ್ನ, ಬೆಳ್ಳಿ ದರ ಇಲ್ಲಿದೆ

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 8ನೇ ತಾರೀಕಿನ ಚಿನ್ನ, ಬೆಳ್ಳಿ ದರ ಇಲ್ಲಿದೆ

ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ