Gold Price Today: ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 500 ರೂ. ಕುಸಿತ

Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,430 ರೂ. ಇದ್ದುದು 52,090 ರೂ. ಆಗಿದೆ. ಇಂದು ಬೆಳ್ಳಿ ದರ 500 ರೂ. ಇಳಿಕೆಯಾಗಿದೆ.

Gold Price Today: ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 500 ರೂ. ಕುಸಿತ
ಚಿನ್ನದ ಬೆಲೆ
Edited By:

Updated on: May 25, 2022 | 5:50 AM

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಕ್ರಮೇಣ ಏರಿಕೆಯಾಗುತ್ತಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ 660 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಕೊಂಚ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,430 ರೂ. ಇದ್ದುದು 52,090 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,350 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,800 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

ಇದನ್ನೂ ಓದಿ: Gold Price Today: ಇಂದು ಮತ್ತೆ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ 700 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,750 ರೂ, ಮುಂಬೈ- 52,090 ರೂ, ದೆಹಲಿ- 52,090 ರೂ, ಕೊಲ್ಕತ್ತಾ- 52,090 ರೂ, ಬೆಂಗಳೂರು- 52,090 ರೂ, ಹೈದರಾಬಾದ್- 52,090 ರೂ, ಕೇರಳ- 52,090 ರೂ, ಪುಣೆ- 52,140 ರೂ, ಮಂಗಳೂರು- 52,090 ರೂ, ಮೈಸೂರು- 52,090 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಏರಿಕೆಯಾಗುತ್ತಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಕುಸಿತವಾಗಿದೆ. ಇಂದು ಬೆಳ್ಳಿ ದರ 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,100 ರೂ. ಇದ್ದುದು ಇಂದು 61,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,100 ರೂ, ಮೈಸೂರು- 66,100 ರೂ., ಮಂಗಳೂರು- 66,100 ರೂ., ಮುಂಬೈ- 61,600 ರೂ, ಚೆನ್ನೈ- 66,100 ರೂ, ದೆಹಲಿ- 61,600 ರೂ, ಹೈದರಾಬಾದ್- 66,100 ರೂ, ಕೊಲ್ಕತ್ತಾ- 61,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us