AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಮತ್ತೆ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ; ಬೆಳ್ಳಿ ಕೊಳ್ಳುವ ಮುನ್ನ ಯೋಚಿಸಿ

Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,000 ರೂ. ಇದ್ದುದು 48,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,370 ರೂ. ಇದ್ದುದು 52,960 ರೂ. ಆಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 200 ರೂ. ಏರಿಕೆಯಾಗಿದೆ.

Gold Price Today: ಮತ್ತೆ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ; ಬೆಳ್ಳಿ ಕೊಳ್ಳುವ ಮುನ್ನ ಯೋಚಿಸಿ
ಚಿನ್ನದ ಬೆಲೆ
TV9 Web
| Edited By: |

Updated on: Apr 30, 2022 | 6:03 AM

Share

ಬೆಂಗಳೂರು: ಕಾಲ ಎಷ್ಟೇ ಬದಲಾದರೂ ಜನರಿಗೆ ಚಿನ್ನದ ಮೇಲಿನ ವ್ಯಾಮೋಹ ಎಂದೂ ಕಡಿಮೆಯಾಗುವುದಿಲ್ಲ. ಬಂಗಾರದ ಬೆಲೆ ಗಗನಕ್ಕೇರಿದರೂ ಚಿನ್ನ ಖರೀದಿ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಇನ್ನೇನು ಅಕ್ಷಯ ತೃತೀಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಚಿನ್ನದ ಬೆಲೆ ಏರಿಕೆಯಾಗುವುದು ಸಾಮಾನ್ಯ. ಅದೇ ರೀತಿ ಕಳೆದ ಮೂರ್ನಾಲ್ಕು ದಿನಗಳಿಂದ ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯಾಗುತ್ತಿದೆ. ಇಂದು ಚಿನ್ನದ ದರ (Gold Rate) 590 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 200 ರೂ. ಏರಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,000 ರೂ. ಇದ್ದುದು 48,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,370 ರೂ. ಇದ್ದುದು 52,960 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,970 ರೂ. ಮುಂಬೈ- 48,550 ರೂ, ದೆಹಲಿ- 48,550 ರೂ, ಕೊಲ್ಕತ್ತಾ- 48,550 ರೂ, ಬೆಂಗಳೂರು- 48,550 ರೂ, ಹೈದರಾಬಾದ್- 48,550 ರೂ, ಕೇರಳ- 48,550 ರೂ, ಪುಣೆ- 48,610 ರೂ, ಮಂಗಳೂರು- 48,550 ರೂ, ಮೈಸೂರು- 48,550 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,420 ರೂ, ಮುಂಬೈ- 52,960 ರೂ, ದೆಹಲಿ- 52,960 ರೂ, ಕೊಲ್ಕತ್ತಾ- 52,960 ರೂ, ಬೆಂಗಳೂರು- 52,960 ರೂ, ಹೈದರಾಬಾದ್- 52,960 ರೂ, ಕೇರಳ- 52,960 ರೂ, ಪುಣೆ- 53,010 ರೂ, ಮಂಗಳೂರು- 52,960 ರೂ, ಮೈಸೂರು- 52,960 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ (Silver Price) ಮತ್ತೆ ಏರಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 200 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 63,800 ರೂ. ಇದ್ದುದು ಇಂದು 64,000 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 69,200 ರೂ, ಮೈಸೂರು- 69,200 ರೂ., ಮಂಗಳೂರು- 69,200 ರೂ., ಮುಂಬೈ- 64,000 ರೂ, ಚೆನ್ನೈ- 69,200 ರೂ, ದೆಹಲಿ- 64,000 ರೂ, ಹೈದರಾಬಾದ್- 69,200 ರೂ, ಕೊಲ್ಕತ್ತಾ- 64,000 ರೂ. ಆಗಿದೆ.

ಇದನ್ನೂ ಓದಿ: Gold Price Today: ಇಂದು ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರ ಮತ್ತೆ ಕುಸಿತ

Gold Price Today: ಭಾರತದಲ್ಲಿ ಮತ್ತೆ ಚಿನ್ನದ ಬೆಲೆ ಇಳಿಕೆ; 1,200 ರೂ. ಕುಸಿತ ಕಂಡ ಬೆಳ್ಳಿ ದರ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!