Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಒಂದೇ ದಿನ 1,300 ರೂ. ಏರಿಕೆಯಾದ ಬೆಳ್ಳಿ ದರ

| Updated By: ಸುಷ್ಮಾ ಚಕ್ರೆ

Updated on: Jun 04, 2022 | 5:55 AM

Silver Price Today: ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 1 ಕೆಜಿಗೆ 1,300 ರೂ. ಹೆಚ್ಚಳವಾಗಿದೆ. ಭಾರತದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಇದ್ದುದು 52,470 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಒಂದೇ ದಿನ 1,300 ರೂ. ಏರಿಕೆಯಾದ ಬೆಳ್ಳಿ ದರ
ಚಿನ್ನ
Image Credit source: Live Mint
Follow us on

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ (Gold Rate) ಇಂದು ಮತ್ತೆ ಏರಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ದರ ಇಂದು 540 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 1,300 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂ. ಇದ್ದುದು 48,100 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಇದ್ದುದು 52,470 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,200 ರೂ. ಮುಂಬೈ- 48,100 ರೂ, ದೆಹಲಿ- 48,100 ರೂ, ಕೊಲ್ಕತ್ತಾ- 48,100 ರೂ, ಬೆಂಗಳೂರು- 48,100 ರೂ, ಹೈದರಾಬಾದ್- 48,100 ರೂ, ಕೇರಳ- 48,100 ರೂ, ಪುಣೆ- 48,180 ರೂ, ಮಂಗಳೂರು- 48,100 ರೂ, ಮೈಸೂರು- 48,100 ರೂ. ಇದೆ. (Source)

ಇದನ್ನೂ ಓದಿ: Gold Price Today: ದಿಢೀರನೆ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 900 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,580 ರೂ, ಮುಂಬೈ- 52,470 ರೂ, ದೆಹಲಿ- 52,470 ರೂ, ಕೊಲ್ಕತ್ತಾ- 52,470 ರೂ, ಬೆಂಗಳೂರು- 52,470 ರೂ, ಹೈದರಾಬಾದ್- 52,470 ರೂ, ಕೇರಳ- 52,470 ರೂ, ಪುಣೆ- 52,550 ರೂ, ಮಂಗಳೂರು- 52,470 ರೂ, ಮೈಸೂರು- 52,470 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 1 ಕೆಜಿಗೆ 1,300 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,400 ರೂ. ಇದ್ದುದು ಇಂದು 62,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 68,500 ರೂ, ಮೈಸೂರು- 68,500 ರೂ., ಮಂಗಳೂರು- 68,500 ರೂ., ಮುಂಬೈ- 62,700 ರೂ, ಚೆನ್ನೈ- 68,500 ರೂ, ದೆಹಲಿ- 62,700 ರೂ, ಹೈದರಾಬಾದ್- 68,500 ರೂ, ಕೊಲ್ಕತ್ತಾ- 62,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ