Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ 650 ರೂ. ಹೆಚ್ಚಳ

| Updated By: ಸುಷ್ಮಾ ಚಕ್ರೆ

Updated on: May 28, 2022 | 6:04 AM

Silver Price Today: ನಿನ್ನೆ ಕುಸಿತವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ 650 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,750 ರೂ. ಆಗಿದೆ.

Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ 650 ರೂ. ಹೆಚ್ಚಳ
ಚಿನ್ನದ ಬೆಲೆ
Image Credit source: Economic Times
Follow us on

ಬೆಂಗಳೂರು: ಭಾರತದಲ್ಲಿ ನಿನ್ನೆ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಕೊಂಚ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 650 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,800 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,850 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

ಇದನ್ನೂ ಓದಿ: Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 26ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,150 ರೂ, ಮುಂಬೈ- 52,090 ರೂ, ದೆಹಲಿ- 52,090 ರೂ, ಕೊಲ್ಕತ್ತಾ- 52,090 ರೂ, ಬೆಂಗಳೂರು- 52,090 ರೂ, ಹೈದರಾಬಾದ್- 52,090 ರೂ, ಕೇರಳ- 52,090 ರೂ, ಪುಣೆ- 52,190 ರೂ, ಮಂಗಳೂರು- 52,090 ರೂ, ಮೈಸೂರು- 52,090 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ನಿನ್ನೆ ಕುಸಿತವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ 650 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 62,150 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,600 ರೂ, ಮೈಸೂರು- 66,600 ರೂ., ಮಂಗಳೂರು- 66,600 ರೂ., ಮುಂಬೈ- 62,150 ರೂ, ಚೆನ್ನೈ- 66,600 ರೂ, ದೆಹಲಿ- 62,150 ರೂ, ಹೈದರಾಬಾದ್- 66,600 ರೂ, ಕೊಲ್ಕತ್ತಾ- 62,150 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ