Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರದಲ್ಲಿ ಇಂದು ಕೊಂಚ ಹೆಚ್ಚಳ

Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 47,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,710 ರೂ. ಆಗಿದೆ. ಇಂದು 1 ಕೆಜಿ ಬೆಳ್ಳಿ ಬೆಲೆ 200 ರೂ. ಏರಿಕೆಯಾಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರದಲ್ಲಿ ಇಂದು ಕೊಂಚ ಹೆಚ್ಚಳ
ಚಿನ್ನದ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 08, 2022 | 6:02 AM

ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ಬೆಲೆ ಇಂದು ಮತ್ತೊಮ್ಮೆ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇಂದು (Gold Price) 330 ರೂ. ಏರಿಕೆ ಕಂಡಿದೆ. ಆದರೆ, ಬೆಳ್ಳಿಯ ಬೆಲೆ (Silver Price) ಇಂದು 200 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 47,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,710 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,770 ರೂ. ಮುಂಬೈ- 47,400 ರೂ, ದೆಹಲಿ- 47,400 ರೂ, ಕೊಲ್ಕತ್ತಾ- 47,400 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,400 ರೂ, ಕೇರಳ- 47,400 ರೂ, ಪುಣೆ- 47,550 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ. ಇದೆ. (Source)

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,200 ರೂ, ಮುಂಬೈ- 51,710 ರೂ, ದೆಹಲಿ- 51,710 ರೂ, ಕೊಲ್ಕತ್ತಾ- 51,710 ರೂ, ಬೆಂಗಳೂರು- 51,710 ರೂ, ಹೈದರಾಬಾದ್- 51,710 ರೂ, ಕೇರಳ- 51,710 ರೂ, ಪುಣೆ- 51,860 ರೂ, ಮಂಗಳೂರು- 51,710 ರೂ, ಮೈಸೂರು- 51,710 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಕೂಡ ಕೊಂಚ ಹೆಚ್ಚಳವಾಗಿದೆ.

ಇಂದಿನ ಬೆಳ್ಳಿಯ ದರ: ಇಂದು 1 ಕೆಜಿ ಬೆಳ್ಳಿ ಬೆಲೆ 200 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 62,300 ರೂ. ಇದ್ದುದು ಇಂದು 62,500 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,800 ರೂ, ಮೈಸೂರು- 66,800 ರೂ., ಮಂಗಳೂರು- 66,800 ರೂ., ಮುಂಬೈ- 62,500 ರೂ, ಚೆನ್ನೈ- 66,800 ರೂ, ದೆಹಲಿ- 62,500 ರೂ, ಹೈದರಾಬಾದ್- 66,800 ರೂ, ಕೊಲ್ಕತ್ತಾ- 62,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ