AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ದಾಖಲೆಯ ಮಟ್ಟಕ್ಕೇರಿದ ಚಿನ್ನದ ಬೆಲೆ; ಒಂದೇ ದಿನದಲ್ಲಿ 1,700 ರೂ. ಏರಿಕೆ ಕಂಡ ಬೆಳ್ಳಿ ದರ

ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 930 ರೂ. ಏರಿಕೆಯಾಗಿದೆ. ಅತ್ತ ಬೆಳ್ಳಿ ದರವೂ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಚಿನ್ನ- ಬೆಳ್ಳಿಯ ಬೆಲೆ ಮತ್ತೆ ಗಗನಕ್ಕೇರಲು ಶುರುವಾಗಿದೆ.

Gold Price Today: ದಾಖಲೆಯ ಮಟ್ಟಕ್ಕೇರಿದ ಚಿನ್ನದ ಬೆಲೆ; ಒಂದೇ ದಿನದಲ್ಲಿ 1,700 ರೂ. ಏರಿಕೆ ಕಂಡ ಬೆಳ್ಳಿ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 25, 2022 | 5:55 AM

Share

Gold and Silver Rate: ಎರಡು ದಿನಗಳಿಂದ ಇಳಿಕೆ ಕಾಣುವ ಮೂಲಕ ಗ್ರಾಹಕರು ನಿಟ್ಟುಸಿರು ಬಿಡುವಂತೆ ಮಾಡಿದ್ದ ಚಿನ್ನದ ಬೆಲೆ ನಿನ್ನೆಯಿಂದ (ಗುರುವಾರ) ಮತ್ತೆ ಏರಿಕೆಯಾಗಿದೆ. ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ನಂತರ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ಚಿನ್ನಾಭರಣ ಖರೀದಿಸುವವರಿಗೆ ಮತ್ತೆ ನಿರಾಸೆಯಾದಂತಾಗಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 930 ರೂ. ಏರಿಕೆಯಾಗಿದೆ. ಅತ್ತ ಬೆಳ್ಳಿ ದರವೂ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಚಿನ್ನ- ಬೆಳ್ಳಿಯ ಬೆಲೆ ಮತ್ತೆ ಗಗನಕ್ಕೇರಲು ಶುರುವಾಗಿದೆ. ಹಾಗಾದರೆ, ಇಂದು ಯಾವೆಲ್ಲ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ. ಇಂದು ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 850 ರೂ. ಏರಿಕೆಯಾಗಿದೆ. ಹಾಗೇ 24 ಕ್ಯಾರೆಟ್ ಚಿನ್ನದ ಬೆಲೆ 930 ರೂ. ಏರಿಕೆಯಾಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 50,180 ರೂ. ಇದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,270 ರೂ, ಮುಂಬೈ- 46,850 ರೂ, ದೆಹಲಿ- 46,850 ರೂ, ಕೊಲ್ಕತ್ತಾ- 46,850 ರೂ, ಬೆಂಗಳೂರು- 46,850 ರೂ, ಹೈದರಾಬಾದ್- 46,850 ರೂ, ಕೇರಳ- 46,850 ರೂ, ಪುಣೆ- 46,900 ರೂ, ಮಂಗಳೂರು- 46,850 ರೂ, ಮೈಸೂರು- 46,850 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,660 ರೂ, ಮುಂಬೈ- 51,110 ರೂ, ದೆಹಲಿ- 51,110 ರೂ, ಕೊಲ್ಕತ್ತಾ- 51,110 ರೂ, ಬೆಂಗಳೂರು- 51,110 ರೂ, ಹೈದರಾಬಾದ್- 51,110 ರೂ, ಕೇರಳ- 51,110 ರೂ, ಪುಣೆ- 51,200 ರೂ, ಮಂಗಳೂರು- 51,110 ರೂ, ಮೈಸೂರು- 51,110 ರೂ. ಇದೆ. 2 ದಿನಗಳ ಹಿಂದೆ 280 ರೂ. ಇಳಿಕೆಯಾಗಿದ್ದ ಚಿನ್ನದ ದರ ಇಂದು 930 ರೂ. ಏರಿಕೆ ಕಂಡಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಇಂದು ಭಾರೀ ಏರಿಕೆ ಕಂಡುಬಂದಿದೆ. ನಿನ್ನೆಗಿಂತ ಇಂದು 1 ಕೆಜಿ ಬೆಳ್ಳಿಗೆ 1,700 ರೂ. ಹೆಚ್ಚಳವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿ ದರ ನಿನ್ನೆ 64,300 ರೂ. ಇದ್ದುದು ಇಂದು 1,700 ರೂ. ಏರಿಕೆ ಕಾಣುವ ಮೂಲಕ 66,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ ಬೆಂಗಳೂರು- 72,700 ರೂ, ಮೈಸೂರು- 72,700 ರೂ., ಮಂಗಳೂರು- 72,700 ರೂ., ಮುಂಬೈ- 66,000 ರೂ, ಚೆನ್ನೈ- 72,700 ರೂ, ದೆಹಲಿ- 66,000 ರೂ, ಹೈದರಾಬಾದ್- 72,700 ರೂ, ಕೊಲ್ಕತ್ತಾ- 66,000 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ಖರೀದಿಸಲು ಇದು ಸಕಾಲ

Gold and Silver Rate: ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಭರ್ಜರಿ ಜಿಗಿತ ಕಂಡ ಚಿನ್ನ; ಫೆ. 24ರ ಚಿನ್ನ- ಬೆಳ್ಳಿ ಬೆಲೆ ಇಲ್ಲಿದೆ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ