Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಬೆಳ್ಳಿ ದರ ಬರೋಬ್ಬರಿ 1,100 ರೂ. ಏರಿಕೆ

3 ದಿನಗಳಿಂದ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 48,000 ರೂ. ಇದ್ದುದು 48,100 ರೂ. ಆಗಿದೆ. ಬೆಳ್ಳಿ ಬೆಲೆ ಕೂಡ ಇಂದು ಬರೋಬ್ಬರಿ 1,100 ರೂ. ಹೆಚ್ಚಳವಾಗಿದೆ.

Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಬೆಳ್ಳಿ ದರ ಬರೋಬ್ಬರಿ 1,100 ರೂ. ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 06, 2022 | 5:49 AM

ಬೆಂಗಳೂರು: ಮೂರು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ (Gold Rate) 130 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 1,100 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. 3 ದಿನಗಳಿಂದ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 48,000 ರೂ. ಇದ್ದುದು 48,100 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,340 ರೂ. ಇದ್ದುದು 52,470 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,050 ರೂ. ಮುಂಬೈ- 48,100 ರೂ, ದೆಹಲಿ- 48,100 ರೂ, ಕೊಲ್ಕತ್ತಾ- 48,100 ರೂ, ಬೆಂಗಳೂರು- 48,130 ರೂ, ಹೈದರಾಬಾದ್- 48,100 ರೂ, ಕೇರಳ- 48,100 ರೂ, ಪುಣೆ- 48,180 ರೂ, ಮಂಗಳೂರು- 48,130 ರೂ, ಮೈಸೂರು- 48,130 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಕುಸಿತ; ಬೆಳ್ಳಿ ದರವೂ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,420 ರೂ, ಮುಂಬೈ- 52,470 ರೂ, ದೆಹಲಿ- 52,470 ರೂ, ಕೊಲ್ಕತ್ತಾ- 52,470 ರೂ, ಬೆಂಗಳೂರು- 52,500 ರೂ, ಹೈದರಾಬಾದ್- 52,470 ರೂ, ಕೇರಳ- 52,470 ರೂ, ಪುಣೆ- 52,470 ರೂ, ಮಂಗಳೂರು- 52,500 ರೂ, ಮೈಸೂರು- 52,500 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ 3 ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ, ಇಂದು ಬರೋಬ್ಬರಿ 1,100 ರೂ. ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 57,800 ರೂ. ಇದ್ದುದು ಇಂದು 58,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,700 ರೂ, ಮೈಸೂರು- 64,700 ರೂ., ಮಂಗಳೂರು- 64,700 ರೂ., ಮುಂಬೈ- 58,900 ರೂ, ಚೆನ್ನೈ- 64,700 ರೂ, ದೆಹಲಿ- 58,900 ರೂ, ಹೈದರಾಬಾದ್- 64,700 ರೂ, ಕೊಲ್ಕತ್ತಾ- 58,900 ರೂ. ಆಗಿದೆ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್