AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬರೋಬ್ಬರಿ 4,200 ರೂ. ಏರಿಕೆ ಕಂಡ ಬೆಳ್ಳಿ ಬೆಲೆ; ಚಿನ್ನ ಕೊಳ್ಳುವವರಿಗೆ ಶುಭ ಸುದ್ದಿ

Silver Price Today: ಇಂದು 1 ಕೆಜಿ ಬೆಳ್ಳಿಗೆ 4,200 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 70,000 ರೂ. ಇದ್ದುದು ಇಂದು 74,200 ರೂ.ಗೆ ಏರಿಕೆಯಾಗಿದೆ.

Gold Price Today: ಬರೋಬ್ಬರಿ 4,200 ರೂ. ಏರಿಕೆ ಕಂಡ ಬೆಳ್ಳಿ ಬೆಲೆ; ಚಿನ್ನ ಕೊಳ್ಳುವವರಿಗೆ ಶುಭ ಸುದ್ದಿ
ಚಿನ್ನದ ಬೆಲೆ
TV9 Web
| Edited By: |

Updated on: Apr 17, 2022 | 6:14 AM

Share

ಬೆಂಗಳೂರು: ನಾಲ್ಕೈದು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗುತ್ತಿದೆ. ಆದರೆ, ಇಂದು ಚಿನ್ನದ ದರ (Gold Rate) ಏರಿಳಿತ ಕಂಡಿಲ್ಲ. ಆದರೆ, ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ ಬರೋಬ್ಬರಿ 4,200 ರೂ. ಏರಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಯಾವುದೇ ಏರಿಳಿತ ಕಂಡಿಲ್ಲ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 49,350 ರೂ. ಇದ್ದುದು 49,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,840 ರೂ. ಇದ್ದುದು 54,060 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,0140 ರೂ. ಮುಂಬೈ- 49,550 ರೂ, ದೆಹಲಿ- 49,550 ರೂ, ಕೊಲ್ಕತ್ತಾ- 49,550 ರೂ, ಬೆಂಗಳೂರು- 49,550 ರೂ, ಹೈದರಾಬಾದ್- 49,550 ರೂ, ಕೇರಳ- 49,550 ರೂ, ಪುಣೆ- 49,580 ರೂ, ಮಂಗಳೂರು- 49,550 ರೂ, ಮೈಸೂರು- 49,550 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 54,700 ರೂ, ಮುಂಬೈ- 54,060 ರೂ, ದೆಹಲಿ- 54,060 ರೂ, ಕೊಲ್ಕತ್ತಾ- 54,060 ರೂ, ಬೆಂಗಳೂರು- 54,060 ರೂ, ಹೈದರಾಬಾದ್- 54,060 ರೂ, ಕೇರಳ- 54,060 ರೂ, ಪುಣೆ- 54,090 ರೂ, ಮಂಗಳೂರು- 54,060 ರೂ, ಮೈಸೂರು- 54,060 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಆದರೆ, ಇಂದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಕೂಡ (Silver Price) ಭಾರೀ ಏರಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು 1 ಕೆಜಿ ಬೆಳ್ಳಿಗೆ 4,200 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 70,000 ರೂ. ಇದ್ದುದು ಇಂದು 74,200 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 74,200 ರೂ, ಮೈಸೂರು- 74,200 ರೂ., ಮಂಗಳೂರು- 74,200 ರೂ., ಮುಂಬೈ- 74,200 ರೂ, ಚೆನ್ನೈ- 74,200 ರೂ, ದೆಹಲಿ- 69,100 ರೂ, ಹೈದರಾಬಾದ್- 74,200 ರೂ, ಕೊಲ್ಕತ್ತಾ- 69,100 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 700 ರೂ. ಹೆಚ್ಚಳ

Gold Price Today: ಬೆಂಗಳೂರು ಸೇರಿ ಹಲವೆಡೆ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಹೀಗಿದೆ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್