AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ಬೆಲೆ ಕೊಂಚ ಏರಿಕೆ; ಬೆಂಗಳೂರು, ಚೆನ್ನೈ, ಮುಂಬೈನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?

Silver Price Today: ಭಾರತದಲ್ಲಿ 2 ದಿನಗಳ ಹಿಂದೆ 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂ. ಆಗಿದೆ. ನಿನ್ನೆ 650 ರೂ. ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಕೇವಲ 50 ರೂ. ಏರಿಕೆಯಾಗಿದೆ.

Gold Price Today: ಬೆಳ್ಳಿ ಬೆಲೆ ಕೊಂಚ ಏರಿಕೆ; ಬೆಂಗಳೂರು, ಚೆನ್ನೈ, ಮುಂಬೈನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?
ಚಿನ್ನದ ಬೆಲೆ
TV9 Web
| Edited By: |

Updated on: May 29, 2022 | 5:52 AM

Share

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳಿಂದ ಚಿನ್ನದ ಬೆಲೆ ಬದಲಾಗಿಲ್ಲ. ಬೆಳ್ಳಿಯ ಬೆಲೆ (Silver Price) ಕೇವಲ 50 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,800 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,850 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

ಇದನ್ನೂ ಓದಿ: Gold Price Today: ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 500 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,150 ರೂ, ಮುಂಬೈ- 52,090 ರೂ, ದೆಹಲಿ- 52,090 ರೂ, ಕೊಲ್ಕತ್ತಾ- 52,090 ರೂ, ಬೆಂಗಳೂರು- 52,090 ರೂ, ಹೈದರಾಬಾದ್- 52,090 ರೂ, ಕೇರಳ- 52,090 ರೂ, ಪುಣೆ- 52,190 ರೂ, ಮಂಗಳೂರು- 52,090 ರೂ, ಮೈಸೂರು- 52,090 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ 650 ರೂ. ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಕೇವಲ 50 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,150 ರೂ. ಇದ್ದುದು ಇಂದು 62,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 62,200 ರೂ, ಚೆನ್ನೈ- 67,000 ರೂ, ದೆಹಲಿ- 62,200 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 62,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್