Gold Price on 15th October 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ (Silver Price) ಇಂದು ಏರಿಳಿತವಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು ಇಂದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,350 ರೂ. ಮುಂಬೈ- 46,750 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,800 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,800 ರೂ, ಮೈಸೂರು- 46,800 ರೂ. ಆಗಿದೆ.
ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು 270 ರೂ. ಕುಸಿತ; ಬೆಳ್ಳಿ ದರ 400 ರೂ. ಇಳಿಕೆ
ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 51,650 ರೂ, ಮುಂಬೈ- 51,000 ರೂ, ದೆಹಲಿ- 51,150 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,050 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,050 ರೂ, ಮೈಸೂರು- 51,050 ರೂ. ಆಗಿದೆ.
ಇಂದಿನ ಬೆಳ್ಳಿಯ ದರ:
ಬೆಳ್ಳಿ ದರ ಕೂಡ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು ಇಂದು 57,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 57,300 ರೂ, ಚೆನ್ನೈ- 62,500 ರೂ, ದೆಹಲಿ- 57,300 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 57,300 ರೂ. ಆಗಿದೆ.