AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಭಾರತದಲ್ಲಿ ಚಿನ್ನದ ಬೆಲೆ 430 ರೂ. ಕುಸಿತ; ಬೆಳ್ಳಿ ದರವೂ ಇಳಿಕೆ

Silver Price Today: ಇಂದು ಕೂಡ ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,500 ರೂ. ಇದ್ದುದು ಇಂದು 61,900 ರೂ. ಆಗಿದೆ.

Gold Price Today: ಭಾರತದಲ್ಲಿ ಚಿನ್ನದ ಬೆಲೆ 430 ರೂ. ಕುಸಿತ; ಬೆಳ್ಳಿ ದರವೂ ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: May 11, 2022 | 6:01 AM

Share

ಬೆಂಗಳೂರು: ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ನಿನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಚಿನ್ನದ ಬೆಲೆ (Gold Price) ಮತ್ತೆ ಕುಸಿತವಾಗಿದೆ. ಚಿನ್ನದ ದರ ಇಂದು 430 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕಳೆದ 3 ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ, ಇಂದು 600 ರೂ. ಕುಸಿತ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,500 ರೂ. ಇದ್ದುದು 47,100 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,810 ರೂ. ಇದ್ದುದು 51,380 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,460 ರೂ. ಮುಂಬೈ- 47,100 ರೂ, ದೆಹಲಿ- 47,100 ರೂ, ಕೊಲ್ಕತ್ತಾ- 47,100 ರೂ, ಬೆಂಗಳೂರು- 47,100 ರೂ, ಹೈದರಾಬಾದ್- 47,100 ರೂ, ಕೇರಳ- 47,100 ರೂ, ಪುಣೆ- 47,200 ರೂ, ಮಂಗಳೂರು- 47,100 ರೂ, ಮೈಸೂರು- 47,100 ರೂ. ಇದೆ. (Source)

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,860 ರೂ, ಮುಂಬೈ- 51,380 ರೂ, ದೆಹಲಿ- 51,380 ರೂ, ಕೊಲ್ಕತ್ತಾ- 51,380 ರೂ, ಬೆಂಗಳೂರು- 51,380 ರೂ, ಹೈದರಾಬಾದ್- 51,380 ರೂ, ಕೇರಳ- 51,380 ರೂ, ಪುಣೆ- 51,500 ರೂ, ಮಂಗಳೂರು- 51,380 ರೂ, ಮೈಸೂರು- 51,380 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆ (Silver Price) 3 ದಿನಗಳಿಂದ ಯಥಾಸ್ಥಿತಿಯಲ್ಲಿದ್ದುದು ಇಂದು 600 ರೂ. ಕುಸಿತ ಕಂಡಿದೆ.

ಇಂದಿನ ಬೆಳ್ಳಿಯ ದರ: ಇಂದು ಕೂಡ ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,500 ರೂ. ಇದ್ದುದು ಇಂದು 61,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,100 ರೂ, ಮೈಸೂರು- 66,100 ರೂ., ಮಂಗಳೂರು- 66,100 ರೂ., ಮುಂಬೈ- 61,900 ರೂ, ಚೆನ್ನೈ- 66,100 ರೂ, ದೆಹಲಿ- 61,900 ರೂ, ಹೈದರಾಬಾದ್- 66,100 ರೂ, ಕೊಲ್ಕತ್ತಾ- 61,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?