AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ

Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 49,300 ರೂ. ಇದ್ದುದು 49,000 ರೂ.ಗೆ ಕುಸಿತವಾಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 500 ರೂ. ಕುಸಿತವಾಗಿದೆ.

Gold Price Today: ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Apr 24, 2022 | 6:02 AM

Share

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತವಾಗಿದೆ. ಇಂದು ಚಿನ್ನದ ದರ (Gold Rate) ಬರೋಬ್ಬರಿ 330 ರೂ. ಇಳಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತವಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 49,300 ರೂ. ಇದ್ದುದು 49,000 ರೂ.ಗೆ ಕುಸಿತವಾಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,780 ರೂ. ಇದ್ದುದು 53,450 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,450 ರೂ. ಮುಂಬೈ- 49,000 ರೂ, ದೆಹಲಿ- 49,000 ರೂ, ಕೊಲ್ಕತ್ತಾ- 49,000 ರೂ, ಬೆಂಗಳೂರು- 49,000 ರೂ, ಹೈದರಾಬಾದ್- 49,000 ರೂ, ಕೇರಳ- 49,000 ರೂ, ಪುಣೆ- 49,050 ರೂ, ಮಂಗಳೂರು- 49,00 ರೂ, ಮೈಸೂರು- 49,000 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,950 ರೂ, ಮುಂಬೈ- 53,450 ರೂ, ದೆಹಲಿ- 53,450 ರೂ, ಕೊಲ್ಕತ್ತಾ- 53,450 ರೂ, ಬೆಂಗಳೂರು- 53,450 ರೂ, ಹೈದರಾಬಾದ್- 53,450 ರೂ, ಕೇರಳ- 53,450 ರೂ, ಪುಣೆ- 53,500 ರೂ, ಮಂಗಳೂರು- 53,450 ರೂ, ಮೈಸೂರು- 53,450 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ (Silver Price) ಭಾರೀ ಇಳಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 500 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 67,100 ರೂ. ಇದ್ದುದು ಇಂದು 66,600 ರೂ.ಗೆ ಇಳಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 71,600 ರೂ, ಮೈಸೂರು- 71,600 ರೂ., ಮಂಗಳೂರು- 71,600 ರೂ., ಮುಂಬೈ- 66,600 ರೂ, ಚೆನ್ನೈ- 71,600 ರೂ, ದೆಹಲಿ- 66,600 ರೂ, ಹೈದರಾಬಾದ್- 71,600 ರೂ, ಕೊಲ್ಕತ್ತಾ- 66,600 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 900 ರೂ. ಕುಸಿತ

Gold Price Today: ಚಿನ್ನ ದರ ಸ್ಥಿರ, ಒಂದು ಕೆಜಿ ಬೆಳ್ಳಿಗೆ ಮತ್ತೆ 900 ರೂಪಾಯಿ ಕುಸಿತ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್