Gold Price Today: ಮೂರ್ನಾಲ್ಕು ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ

Silver Price Today: . ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಂದು 1 ಕೆಜಿಗೆ 400 ರೂ. ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,950 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 52,100 ರೂ. ಆಗಿದೆ.

Gold Price Today: ಮೂರ್ನಾಲ್ಕು ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ
ಚಿನ್ನದ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 30, 2022 | 6:03 AM

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ನಿನ್ನೆ 280 ರೂ. ಕುಸಿತ ಕಂಡಿದ್ದ ಬಂಗಾರದ ಬೆಲೆ (Gold Rate) ಇಂದು ಮತ್ತು 210 ರೂ. ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಂದು 1 ಕೆಜಿಗೆ ಬರೋಬ್ಬರಿ 400 ರೂ. ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,950 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 52,100 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,930 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 48,820 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,290 ರೂ, ಮುಂಬೈ- 52,100 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 52,100 ರೂ, ಬೆಂಗಳೂರು- 52,100 ರೂ, ಹೈದರಾಬಾದ್- 52,100 ರೂ, ಕೇರಳ- 52,100 ರೂ, ಪುಣೆ- 52,170 ರೂ, ಮಂಗಳೂರು- 52,100 ರೂ, ಮೈಸೂರು- 52,100ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಕೂಡ ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ಮೂರ್ನಾಲ್ಕು ದಿನಗಳಿಂದ ದೇಶದಲ್ಲಿ ಬೆಳ್ಳಿ ಬೆಲೆ ಕೂಡ ಕುಸಿತವಾಗುತ್ತಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 400 ರೂ. ಇಳಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 68,400 ರೂ. ಇದ್ದುದು ಇಂದು 68,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,100 ರೂ, ಮೈಸೂರು- 72,100 ರೂ., ಮಂಗಳೂರು- 72,100 ರೂ., ಮುಂಬೈ- 68,000 ರೂ, ಚೆನ್ನೈ- 72,100 ರೂ, ದೆಹಲಿ- 68,000 ರೂ, ಹೈದರಾಬಾದ್- 72,100 ರೂ, ಕೊಲ್ಕತ್ತಾ- 68,000 ರೂ. ಇದೆ.

ಇದನ್ನೂ ಓದಿ: Gold Price Today: ಬೆಳ್ಳಿ ಬೆಲೆ ಒಂದೇ ದಿನದಲ್ಲಿ 1,100 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಎಷ್ಟಿದೆ?

Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; 1,500 ರೂ. ಹೆಚ್ಚಳ ಕಂಡ ಬೆಳ್ಳಿ ದರ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ