AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ಬೆಲೆ ಒಂದೇ ದಿನದಲ್ಲಿ 4,100 ರೂ. ಏರಿಕೆ

Silver Price Today: ನಾಲ್ಕೈದು ದಿನಗಳಿಂದ ಕುಸಿತ ಕಂಡಿದ್ದ ಬೆಳ್ಳಿ ಬೆಲೆ ಇಂದು ಗಗನಕ್ಕೇರಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 4,100 ರೂ. ಏರಿಕೆಯಾಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ಬೆಲೆ ಒಂದೇ ದಿನದಲ್ಲಿ 4,100 ರೂ. ಏರಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Mar 31, 2022 | 5:50 AM

Share

ಬೆಂಗಳೂರು: ಭಾರತದಲ್ಲಿ ಇಂದು ಕೂಡ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ನಿನ್ನೆ 210 ರೂ. ಕುಸಿತ ಕಂಡಿದ್ದ ಬಂಗಾರದ ಬೆಲೆ (Gold Rate) ಇಂದು 120 ರೂ. ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ (Silver Price) ಇಂದು 1 ಕೆಜಿಗೆ ಬರೋಬ್ಬರಿ 4,100 ರೂ. ಏರಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,750 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,920 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,700 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,280 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಕೂಡ ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ನಾಲ್ಕೈದು ದಿನಗಳಿಂದ ಕುಸಿತ ಕಂಡಿದ್ದ ಬೆಳ್ಳಿ ಬೆಲೆ ಇಂದು ಗಗನಕ್ಕೇರಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 4,100 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 68,000 ರೂ. ಇದ್ದುದು ಇಂದು 72,100 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,100 ರೂ, ಮೈಸೂರು- 72,100 ರೂ., ಮಂಗಳೂರು- 72,100 ರೂ., ಮುಂಬೈ- 72,100 ರೂ, ಚೆನ್ನೈ- 72,100 ರೂ, ದೆಹಲಿ- 67,200 ರೂ, ಹೈದರಾಬಾದ್- 72,100 ರೂ, ಕೊಲ್ಕತ್ತಾ- 67,200 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಮುಂಬೈ ಸೇರಿ ಹಲವು ನಗರಗಳಲ್ಲಿ ಇಂದು ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ

Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; 1,500 ರೂ. ಹೆಚ್ಚಳ ಕಂಡ ಬೆಳ್ಳಿ ದರ

Follow Us
TV9 Web
TV9 Web

TV9 Kannada

Read More
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ