AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರವೂ 300 ರೂ. ಹೆಚ್ಚಳ

Silver Price Today: ಇಂದು 1 ಕೆಜಿ ಬೆಳ್ಳಿ ಬೆಲೆ 300 ರೂ. ಏರಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,250 ರೂ. ಇದ್ದುದು 48,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,630 ರೂ. ಇದ್ದುದು 53,020 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರವೂ 300 ರೂ. ಹೆಚ್ಚಳ
ಚಿನ್ನದ ಬೆಲೆ
TV9 Web
| Edited By: |

Updated on: Apr 10, 2022 | 5:56 AM

Share

ಬೆಂಗಳೂರು: ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಚಿನ್ನದ ಬೆಲೆ (Gold Prices) ಇಂದು ಮತ್ತೆ ಗಗನಕ್ಕೇರಿದೆ. ಭಾರತದಲ್ಲಿ ಚಿನ್ನದ ದರ (Gold Rate) ಇಂದು 10 ಗ್ರಾಂ.ಗೆ 390 ರೂ. ಏರಿಕೆಯಾಗಿದೆ. ಆದರೆ, ನಿನ್ನೆ ದಾಖಲೆಯ 4,200 ರೂ. ಕುಸಿತ ಕಂಡಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 300 ರೂ. ಏರಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,250 ರೂ. ಇದ್ದುದು 48,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,630 ರೂ. ಇದ್ದುದು 53,020 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,190 ರೂ. ಮುಂಬೈ- 48,600 ರೂ, ದೆಹಲಿ- 48,600 ರೂ, ಕೊಲ್ಕತ್ತಾ- 48,600 ರೂ, ಬೆಂಗಳೂರು- 48,600 ರೂ, ಹೈದರಾಬಾದ್- 48,600 ರೂ, ಕೇರಳ- 48,600 ರೂ, ಪುಣೆ- 48,700 ರೂ, ಮಂಗಳೂರು- 48,600 ರೂ, ಮೈಸೂರು- 48,600 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,660 ರೂ, ಮುಂಬೈ- 53,020 ರೂ, ದೆಹಲಿ- 53,020 ರೂ, ಕೊಲ್ಕತ್ತಾ- 53,020 ರೂ, ಬೆಂಗಳೂರು- 53,020 ರೂ, ಹೈದರಾಬಾದ್- 53,020 ರೂ, ಕೇರಳ- 53,020 ರೂ, ಪುಣೆ- 53,120 ರೂ, ಮಂಗಳೂರು- 53,020 ರೂ, ಮೈಸೂರು- 53,020 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಕೂಡ ಏರಿಕೆಯಾಗುತ್ತಲೇ ಇದೆ.

ಇಂದಿನ ಬೆಳ್ಳಿಯ ದರ: ಇಂದು 1 ಕೆಜಿ ಬೆಳ್ಳಿ ಬೆಲೆ 300 ರೂ. ಏರಿಕೆ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 66,800 ರೂ. ಇದ್ದುದು ಇಂದು 67,100 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 71,500 ರೂ, ಮೈಸೂರು- 71,500 ರೂ., ಮಂಗಳೂರು- 71,500 ರೂ., ಮುಂಬೈ- 71,500 ರೂ, ಚೆನ್ನೈ- 71,500 ರೂ, ದೆಹಲಿ- 67,100 ರೂ, ಹೈದರಾಬಾದ್- 71,500 ರೂ, ಕೊಲ್ಕತ್ತಾ- 67,100 ರೂ. ಆಗಿದೆ.

ಇದನ್ನೂ ಓದಿ: Gold Price Today: ಒಂದೇ ದಿನ 4,800 ರೂ. ಏರಿಕೆಯಾಗಿ ದಾಖಲೆ ಬರೆದ ಬೆಳ್ಳಿ ದರ; ಚಿನ್ನದ ಬೆಲೆಯೂ ಹೆಚ್ಚಳ

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಭಾರೀ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​