AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 900 ರೂ. ಕುಸಿತ

Silver Price Today: ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 49,150 ರೂ. ಇದ್ದುದು 49,300 ರೂ.ಗೆ ಏರಿಕೆಯಾಗಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 900 ರೂ. ಕುಸಿತವಾಗಿದೆ.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 900 ರೂ. ಕುಸಿತ
ಚಿನ್ನದ ಬೆಲೆ
TV9 Web
| Edited By: |

Updated on: Apr 22, 2022 | 6:01 AM

Share

ಬೆಂಗಳೂರು: ನಿನ್ನೆ ಭಾರೀ ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಚಿನ್ನದ ದರ (Gold Rate) ಬರೋಬ್ಬರಿ 160 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 900 ರೂ. ಇಳಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಹೆಚ್ಚಳವಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 49,150 ರೂ. ಇದ್ದುದು 49,300 ರೂ.ಗೆ ಏರಿಕೆಯಾಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,620 ರೂ. ಇದ್ದುದು 53,780 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,460 ರೂ. ಮುಂಬೈ- 49,300 ರೂ, ದೆಹಲಿ- 49,300 ರೂ, ಕೊಲ್ಕತ್ತಾ- 49,300 ರೂ, ಬೆಂಗಳೂರು- 49,300 ರೂ, ಹೈದರಾಬಾದ್- 49,300 ರೂ, ಕೇರಳ- 49,300 ರೂ, ಪುಣೆ- 49,360 ರೂ, ಮಂಗಳೂರು- 49,300 ರೂ, ಮೈಸೂರು- 49,300 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,960 ರೂ, ಮುಂಬೈ- 53,780 ರೂ, ದೆಹಲಿ- 53,780 ರೂ, ಕೊಲ್ಕತ್ತಾ- 53,780 ರೂ, ಬೆಂಗಳೂರು- 53,780 ರೂ, ಹೈದರಾಬಾದ್- 53,780 ರೂ, ಕೇರಳ- 53,780 ರೂ, ಪುಣೆ- 53,840 ರೂ, ಮಂಗಳೂರು- 53,780 ರೂ, ಮೈಸೂರು- 53,780 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ (Silver Price) ಭಾರೀ ಇಳಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 900 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 68,300 ರೂ. ಇದ್ದುದು ಇಂದು 67,400 ರೂ.ಗೆ ಇಳಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 73,000 ರೂ, ಮೈಸೂರು- 73,000 ರೂ., ಮಂಗಳೂರು- 73,000 ರೂ., ಮುಂಬೈ- 67,400 ರೂ, ಚೆನ್ನೈ- 73,000 ರೂ, ದೆಹಲಿ- 67,400 ರೂ, ಹೈದರಾಬಾದ್- 73,000 ರೂ, ಕೊಲ್ಕತ್ತಾ- 67,400 ರೂ. ಆಗಿದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ಬೆಳ್ಳಿ ಬೆಲೆ 1,700 ರೂ. ಕುಸಿತ; ಚಿನ್ನ ಖರೀದಿಸುವವರೂ ತಡ ಮಾಡಬೇಡಿ!

Gold Price Today: ಇಂದು ಚಿನ್ನದ ಬೆಲೆ ಸ್ಥಿರ, ಬೆಳ್ಳಿ ಬೆಲೆ ಕೊಂಚ ಇಳಿಕೆ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು