Gold Price Today: ಮದುವೆಗೆ ಬಂಗಾರ ಖರೀದಿಸಲು ಯೋಚಿಸಿದ್ದೀರಾ?; ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

Silver Price on March 19: ಮದುವೆ ಸಮಾರಂಭಗಳ ಸೀಸನ್ ಶುರುವಾಗಿದ್ದು, ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

Gold Price Today: ಮದುವೆಗೆ ಬಂಗಾರ ಖರೀದಿಸಲು ಯೋಚಿಸಿದ್ದೀರಾ?; ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ
ಚಿನ್ನದ ಬೆಲೆ
Follow us
| Updated By: ಸುಷ್ಮಾ ಚಕ್ರೆ

Updated on: Mar 19, 2022 | 6:05 AM

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold Rate) ನಿನ್ನೆ ಮತ್ತೆ ಏರಿಕೆಯಾಗಿತ್ತು. ಇಂದು 10 ಗ್ರಾಂ ಚಿನ್ನಕ್ಕೆ ಕೇವಲ 10 ರೂ. ಹೆಚ್ಚಳವಾಗಿದೆ. ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 10 ರೂ. ಏರಿಕೆಯಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಾಗಿಲ್ಲ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಂದು ಯಥಾಸ್ಥಿತಿಯಲ್ಲಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಅನೇಕ ನಗರಗಳಲ್ಲಿ ಎರಡು ದಿನಗಳಿಂದ ಚಿನ್ನದ ಬೆಲೆ ಕುಸಿತವಾಗಿತ್ತು. ಆದರೆ, ಇಂದು ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,450 ರೂ. ಇದ್ದುದು ಯಥಾಸ್ಥಿತಿಯಲ್ಲಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,760 ರೂ. ಇದ್ದುದು 51,770 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,220 ರೂ. ಮುಂಬೈ- 47,450 ರೂ, ದೆಹಲಿ- 47,450 ರೂ, ಕೊಲ್ಕತ್ತಾ- 47,450 ರೂ, ಬೆಂಗಳೂರು- 47,450 ರೂ, ಹೈದರಾಬಾದ್- 47,450 ರೂ, ಕೇರಳ- 47,450 ರೂ, ಪುಣೆ- 47,480 ರೂ, ಮಂಗಳೂರು- 47,450 ರೂ, ಮೈಸೂರು- 47,450 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,600 ರೂ, ಮುಂಬೈ- 51,770 ರೂ, ದೆಹಲಿ- 51,770 ರೂ, ಕೊಲ್ಕತ್ತಾ- 51,770 ರೂ, ಬೆಂಗಳೂರು- 51,770 ರೂ, ಹೈದರಾಬಾದ್- 51,770 ರೂ, ಕೇರಳ- 51,770 ರೂ, ಪುಣೆ- 51,790 ರೂ, ಮಂಗಳೂರು- 51,770 ರೂ, ಮೈಸೂರು- 51,770 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ಕಳೆದ ವಾರದಿಂದ ಗಗನಕ್ಕೇರಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯ ಕಾಯ್ದುಕೊಂಡಿದೆ. ಇಂದು ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 69,000 ರೂ. ಇದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,900 ರೂ, ಮೈಸೂರು- 72,900 ರೂ., ಮಂಗಳೂರು- 72,900 ರೂ., ಮುಂಬೈ- 69,000 ರೂ, ಚೆನ್ನೈ- 72,900 ರೂ, ದೆಹಲಿ- 69,000 ರೂ, ಹೈದರಾಬಾದ್- 72,900 ರೂ, ಕೊಲ್ಕತ್ತಾ- 69,000 ರೂ. ಇದೆ. ವಿವಿಧ ನಗರಗಳಲ್ಲಿ ಕೂಡ ಇಂದು ಬೆಳ್ಳಿ ದರ ವ್ಯತ್ಯಾಸವಾಗಿಲ್ಲ.

ಇದನ್ನೂ ಓದಿ: Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಚಿನ್ನ, ಬೆಳ್ಳಿ ದರ ಹೀಗಿದೆ

Gold Price on March 18: 4 ದಿನದ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 1,100 ರೂ. ಹೆಚ್ಚಳ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್