AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರವೂ ಹೆಚ್ಚಳ

Silver Price Today: ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 69,300 ರೂ. ಇದ್ದುದು ಇಂದು 70,000 ರೂ.ಗೆ ಏರಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರವೂ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 16, 2022 | 6:09 AM

Share

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗುತ್ತಿದೆ. ಇಂದು ಚಿನ್ನದ ದರ (Gold Rate) 220 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಒಂದೇ ದಿನದಲ್ಲಿ 700 ರೂ. ಏರಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 49,350 ರೂ. ಇದ್ದುದು 49,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,840 ರೂ. ಇದ್ದುದು 54,060 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,050 ರೂ. ಮುಂಬೈ- 49,550 ರೂ, ದೆಹಲಿ- 49,550 ರೂ, ಕೊಲ್ಕತ್ತಾ- 49,550 ರೂ, ಬೆಂಗಳೂರು- 49,550 ರೂ, ಹೈದರಾಬಾದ್- 49,550 ರೂ, ಕೇರಳ- 49,550 ರೂ, ಪುಣೆ- 49,580 ರೂ, ಮಂಗಳೂರು- 49,550 ರೂ, ಮೈಸೂರು- 49,550 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 54,600 ರೂ, ಮುಂಬೈ- 54,060 ರೂ, ದೆಹಲಿ- 54,060 ರೂ, ಕೊಲ್ಕತ್ತಾ- 54,060 ರೂ, ಬೆಂಗಳೂರು- 54,060 ರೂ, ಹೈದರಾಬಾದ್- 54,060 ರೂ, ಕೇರಳ- 54,060 ರೂ, ಪುಣೆ- 54,090 ರೂ, ಮಂಗಳೂರು- 54,060 ರೂ, ಮೈಸೂರು- 54,060 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ (Silver Price) ಭಾರೀ ಏರಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ಇಂದು 1 ಕೆಜಿ ಬೆಳ್ಳಿಗೆ 700 ರೂ. ಏರಿಕಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 69,300 ರೂ. ಇದ್ದುದು ಇಂದು 70,000 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 74,400 ರೂ, ಮೈಸೂರು- 74,400 ರೂ., ಮಂಗಳೂರು- 74,400 ರೂ., ಮುಂಬೈ- 70,000 ರೂ, ಚೆನ್ನೈ- 74,400 ರೂ, ದೆಹಲಿ- 70,000 ರೂ, ಹೈದರಾಬಾದ್- 74,400 ರೂ, ಕೊಲ್ಕತ್ತಾ- 70,000 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಮತ್ತೆ ಏರಿಕೆ; ಒಂದೇ ದಿನದಲ್ಲಿ 4,200 ರೂ. ಕುಸಿತ ಕಂಡ ಬೆಳ್ಳಿ ದರ

Gold Price Today: ಒಂದೇ ದಿನ 4,800 ರೂ. ಏರಿಕೆಯಾಗಿ ದಾಖಲೆ ಬರೆದ ಬೆಳ್ಳಿ ದರ; ಚಿನ್ನದ ಬೆಲೆಯೂ ಹೆಚ್ಚಳ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ