Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್; ಬೆಳ್ಳಿ ಬೆಲೆ ಕೊಂಚ ಇಳಿಕೆ

Silver Price Today: ಭಾರತದಲ್ಲಿ ಚಿನ್ನದ ದರ ಇಂದು ಕೂಡ ಯಥಾಸ್ಥಿತಿಯಲ್ಲಿದೆ. ಕಳೆದ ವಾರ ಭಾರೀ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇದೀಗ ಒಂದೇ ರೀತಿಯಲ್ಲಿದೆ. ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 100 ರೂ. ಇಳಿಕೆ ಕಂಡಿದೆ.

Gold Price Today: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್; ಬೆಳ್ಳಿ ಬೆಲೆ ಕೊಂಚ ಇಳಿಕೆ
ಚಿನ್ನದ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 07, 2022 | 6:09 AM

ಬೆಂಗಳೂರು: ಇನ್ನೇನು ಮದುವೆ, ಸಮಾರಂಭಗಳ ಸೀಸನ್ ಶುರುವಾಗಿದೆ. ಶುಭ ಕಾರ್ಯಕ್ರಮಗಳಿಗೆ ಚಿನ್ನ ಖರೀದಿಸುವ ಸಂಪ್ರದಾಯ ಅನೇಕ ಕುಟುಂಬಗಳಲ್ಲಿ ರೂಢಿಯಲ್ಲಿದೆ. ಕಳೆದ 2 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ (Gold Prices) ಯಾವುದೇ ಏರಿಳಿತವನ್ನೂ ಕಂಡಿಲ್ಲ. ಭಾರತದಲ್ಲಿ ಚಿನ್ನದ ದರ (Gold Rate) ಇಂದು ಕೂಡ ಯಥಾಸ್ಥಿತಿಯಲ್ಲಿದೆ. ಕಳೆದ ವಾರ ಭಾರೀ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇದೀಗ ಒಂದೇ ರೀತಿಯಲ್ಲಿದೆ. ಆದರೆ, ಬೆಳ್ಳಿಯ ಬೆಲೆ (Silver Price) ಇಂದು 100 ರೂ. ಇಳಿಕೆ ಕಂಡಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,460 ರೂ. ಇದ್ದುದು 52,140 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. 2 ದಿನಗಳ ಹಿಂದೆ ಚೆನ್ನೈ- 48,420 ರೂ. ಮುಂಬೈ- 47,800 ರೂ, ದೆಹಲಿ- 47,800 ರೂ, ಕೊಲ್ಕತ್ತಾ- 47,800 ರೂ, ಬೆಂಗಳೂರು- 47,800 ರೂ, ಹೈದರಾಬಾದ್- 47,800 ರೂ, ಕೇರಳ- 47,800 ರೂ, ಪುಣೆ- 47,850 ರೂ, ಮಂಗಳೂರು- 47,800 ರೂ, ಮೈಸೂರು- 47,800 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,820 ರೂ, ಮುಂಬೈ- 52,140 ರೂ, ದೆಹಲಿ- 52,140 ರೂ, ಕೊಲ್ಕತ್ತಾ- 52,140 ರೂ, ಬೆಂಗಳೂರು- 52,140 ರೂ, ಹೈದರಾಬಾದ್- 52,140 ರೂ, ಕೇರಳ- 52,140 ರೂ, ಪುಣೆ- 52,190 ರೂ, ಮಂಗಳೂರು- 52,140 ರೂ, ಮೈಸೂರು- 52,140 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಾಗಿಲ್ಲ. ಬೆಳ್ಳಿ ಬೆಲೆ (Silver Price) ಮಾತ್ರ ಕುಸಿತವಾಗುತ್ತಲೇ ಇದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 100 ರೂ. ಇಳಿಕೆ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 66,300 ರೂ. ಇದ್ದುದು ಇಂದು 66,200 ರೂ.ಗೆ ಕುಸಿತವಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 70,700 ರೂ, ಮೈಸೂರು- 70,700 ರೂ., ಮಂಗಳೂರು- 70,700 ರೂ., ಮುಂಬೈ- 66,200 ರೂ, ಚೆನ್ನೈ- 70,700 ರೂ, ದೆಹಲಿ- 66,200 ರೂ, ಹೈದರಾಬಾದ್- 70,700 ರೂ, ಕೊಲ್ಕತ್ತಾ- 66,200 ರೂ. ಆಗಿದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಭಾರೀ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ

Gold Price Today: ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ಬೆಲೆ ಒಂದೇ ದಿನದಲ್ಲಿ 4,100 ರೂ. ಏರಿಕೆ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ